ETV Bharat / bharat

ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿಗೆ ನ್ಯಾಯಾಂಗ ಬಂಧನ - ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿ

ಘಾಜಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿಯನ್ನು ಸ್ಥಳೀಯ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

prajapati
prajapati
author img

By

Published : Sep 12, 2020, 10:50 AM IST

ಲಕ್ನೋ (ಉತ್ತರ ಪ್ರದೇಶ): ವಂಚನೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿರುವ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿಯನ್ನು ಸ್ಥಳೀಯ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್​ನಿಂದ ಸೆಪ್ಟೆಂಬರ್ 4ರಂದು ಎರಡು ತಿಂಗಳ ಕಾಲ ಮಧ್ಯಂತರ ಜಾಮೀನು ಪಡೆದ ಪ್ರಜಾಪತಿ, ಜಾಮೀನು ಷರತ್ತುಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ನ್ಯಾಯಾಂಗ ಬಂಧನದಲ್ಲಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಾಜಿಪುರ ಪೊಲೀಸ್ ಠಾಣೆಯಲ್ಲಿ ಪ್ರಜಾಪತಿ ವಿರುದ್ಧ ದಾಖಲಾದ ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋ ಪೊಲೀಸರು 14 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಹಿಂದೆ ಮಾಜಿ ಸಚಿವರು ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಅಪ್ರಾಪ್ತ ಮಗಳಿಗೆ ಕಿರುಕುಳ ನೀಡಲು ಯತ್ನಿಸಿದ್ದ. ಮಾರ್ಚ್ 15, 2017ರಿಂದ ಜೈಲಿನಲ್ಲಿದ್ದರು. ಪ್ರಸ್ತುತ ಕೆಜಿಎಂಯುನಲ್ಲಿ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಪ್ರಜಾಪತಿಯಿಂದ ದೂರವಾಣಿಯಲ್ಲಿ ಬೆದರಿಕೆ ಬಂದಿದೆ ಎಂದು ವಕೀಲರು ಆರೋಪಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.