ವಾರಣಾಸಿ (ಉತ್ತರ ಪ್ರದೇಶ): ಜಿಲ್ಲೆಯಲ್ಲಿ ಉಂಟಾದ ಭೀಕರ ಮಳೆಯಿಂದಾಗಿ ಗಂಗಾ ನದಿಯ ನೀರಿನ ಮಟ್ಟ ಹೆಚ್ಚಾಗಿದ್ದು, ನದಿ ದಡದಲ್ಲಿರುವ ಘಾಟ್‌ಗಳು ಮುಳುಗಿವೆ.
ಉತ್ತರ ಪ್ರದೇಶದ ವಾರಣಾಸಿ, ಪ್ರಯಾಗರಾಜ್ನಲ್ಲಿ ಉತ್ತಮ ಮಳೆಯಾಗಿ ನೀರಿನ ಹರಿವು ಹೆಚ್ಚುತ್ತಿರುವ ಕಾರಣ ನಗರದ ತಗ್ಗು ಪ್ರದೇಶಗಳು ಪ್ರವಾಹ ಪರಿಸ್ಥಿತಿ ಎದುರಿಸುವಂತಾಗಿದೆ. ಗಂಗಾ ನದಿ ನೀರಿನ ಮಟ್ಟದಲ್ಲಿ ತೀವ್ರ ಏರಿಕೆಯಾದ ಹಿನ್ನೆಲೆ, ನದಿ ದಡದ ಘಾಟ್‌ಗಳು ಮುಳುಗಿ ಸಾಕಷ್ಟು ಹಾನಿಯಾಗಿದೆ.
ಭಾರತದ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಉತ್ತರ ಪ್ರದೇಶದ ಕೆಲವು ಸ್ಥಳಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ರಾಜಸ್ಥಾನ, ಅರುಣಾಚಲ ಪ್ರದೇಶ, ಅಸ್ಸೋಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರ, ಪಶ್ಚಿಮ ಬಂಗಾಳ, ಸಿಕ್ಕಿಂ, ಮಧ್ಯ ಮಹಾರಾಷ್ಟ್ರದ ಕೆಲ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂಇಟಿ ಇಲಾಖೆ ಇಂದು ತನ್ನ ಅಖಿಲ ಭಾರತ ಹವಾಮಾನ ಎಚ್ಚರಿಕೆ ಬುಲೆಟಿನ್ನಲ್ಲಿ ತಿಳಿಸಿದೆ.
ನೈರುತ್ಯ ಅರೇಬಿಯನ್ ಸಮುದ್ರದ ಮೇಲೆ ಬಲವಾದ ಗಾಳಿ ಬೀಸತೊಡಗಿದ್ದು, ಗಂಟೆಗೆ 45-55 ಕಿ.ಮೀ ವೇಗ ಬೀಸುವ ಸಾಧ್ಯತೆ ಇದೆ. ಆದ್ದರಿಂದ ಮುಂದಿನ ಕೆಲವು ದಿನಗಳವರೆಗೆ ಈ ಪ್ರದೇಶಗಳಿಗೆ ಕಾಲಿಡದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.