ಗಾಝಿಯಾಬಾದ್ :(ಉತ್ತರ ಪ್ರದೇಶ) ಸಾಹಿಬಾ ಬಾದ್ ಪ್ರದೇಶದ ನ್ಯಾಯಬೆಲೆ ಅಂಗಡಿಯ ಅವ್ಯವಸ್ಥೆಯ ಬಗ್ಗೆ ಈಟಿವಿ ಭಾರತ ಪ್ರಕಟಿಸಿದ್ದ ವರದಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಈ ಬಗ್ಗೆ ಮಾಹಿತಿ ಪಡೆದುಕೊಂಡು ಸಮಸ್ಯೆಯನ್ನು ಪರಿಹರಿಸಿದ್ದಾರೆ.
ಸಾಹಿಬಾ ಬಾದ್‌ನ ನ್ಯಾಯಬೆಲೆ ಅಂಗಡಿಯಲ್ಲಿ ಎಲ್ಲವೂ ಅವ್ಯವಸ್ಥೆಯಿಂದ ಕೂಡಿತ್ತು. ಗ್ರಾಹಕರ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಯಾವುದೇ ರೀತಿಯ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುತ್ತಿರಲಿಲ್ಲ. ಈ ಬಗ್ಗೆ ಈಟಿವಿ ಭಾರತ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಡಿಸಿ ಅಜಯ್ ಶಂಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, ನ್ಯಾಯಾಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳುವಾಗ ಜನರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ಪ್ರೊಟೋಕಾಲ್ಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ. ಅಲ್ಲದೆ, ಸ್ಥಳದಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದಿದ್ದಾರೆ.
ಉತ್ತರಪ್ರದೇಶದಲ್ಲಿ ಈವರೆಗೆ ಒಟ್ಟು 735 ಕೊರೊನಾ ಪ್ರಕರಣಗಳು ದಾಖಲಾಗಿವೆ, 11 ಸಾವನ್ನಪ್ಪಿದ್ದಾರೆ.