ಗಾಜಿಯಾಬಾದ್( ಉತ್ತರಪ್ರದೇಶ): ಪ್ರಸವ ವೇದನೆಯಿಂದ ನಡು ರಸ್ತೆಯಲ್ಲೇ ಒದ್ದಾಡುತ್ತಿದ್ದ ತುಂಬು ಗರ್ಭಿಣಿಯೊಬ್ಬರು ಪೊಲೀಸ್ ಜೀಪ್ನಲ್ಲೇ ಮುದ್ದಾದ ಮಗುವಿಗೆ ಜನ್ಮ ನೀಡಿದ್ದಾರೆ.
ಉತ್ತರಪ್ರದೇಶದ ಗಾಜಿಯಾಬಾದ್ ರೈಲ್ವೆ ಸ್ಟೇಷನ್ನ ಪಂಚಮಹಲ್ ರೋಡ್ನಲ್ಲಿ ಈ ಘಟನೆ ನಡೆದಿದೆ. ಆಂಬುಲೆನ್ಸ್ಗೆ ಪೋನ್ ಮಾಡಿದ್ರೂ ಸಮಯಕ್ಕೆ ಸರಿಯಾಗಿ ಬಾರದ ಕಾರಣ ಪೊಲೀಸರು ತಮ್ಮ ಜೀಪ್ನಲ್ಲಿಯೇ ಹೆರಿಗೆ ಮಾಡಿಸಿಕೊಂಡಿದ್ದಾರೆ.
ನಡು ರಸ್ತೆಯಲ್ಲೇ ಹೆರಿಗೆ ನೋವಿನಿಂದ ಮಹಿಳೆ ಬಳಲುತ್ತಿದ್ದರಿಂದ ಅದನ್ನು ಗಮನಿಸಿದ ಪೊಲೀಸರು ತಕ್ಷಣವೇ ಪೊಲೀಸ್ ಕಂಟ್ರೋಲ್ ರೂಂ 112 ನಂಬರ್ಗೆ ಡಯಲ್ ಮಾಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸ್ ವಾಹನದಲ್ಲೇ ಮಹಿಳೆ ಮಗುವಿಗೆ ಜನ್ಮ ನೀಡಿದ್ದು, ತಾಯಿ- ಮಗು ಸುರಕ್ಷಿತವಾಗಿದ್ದಾರೆ. ಮಹಿಳೆ ಹೆರಿಗೆ ವೇಳೆ ಇಬ್ಬರು ಮಹಿಳಾ ಕಾನ್ಸ್ಟೆಬಲ್ ಜವಾಬ್ದಾರಿ ನಿರ್ವಹಿಸಿದ್ದಾರೆ. ಇದಾದ ಬಳಿಕ ಪೊಲೀಸರು ತಮ್ಮ ಜೀಪ್ನಲ್ಲಿಯೇ ಅವರನ್ನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರದಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಶಹಬ್ಬಾಸ್ ಅಂತಿದ್ದಾರೆ.