ನವದೆಹಲಿ: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆ ದೆಹಲಿಯ ಸಿಂಘು, ಗಾಜಿಪುರ ಮತ್ತು ಟಿಕ್ರಿ ಗಡಿಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಗೃಹ ಸಚಿವಾಲಯ ಸ್ಥಗಿತಗೊಳಿಸಿದೆ. ರೈತರ 'ಚಕ್ಕಾ ಜಾಮ್' ಕರೆಯ ಹಿನ್ನೆಲೆಯಲ್ಲಿ ಶನಿವಾರ ರಾತ್ರಿಯವರೆಗೆ 24 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತಗೊಳಿಸಿದೆ.
ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ಮತ್ತು ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ತಪ್ಪಿಸುವ ಹಿತದೃಷ್ಟಿಯಿಂದ ಸಿಂಘು, ಗಾಜಿಪುರ ಮತ್ತು ಟಿಕ್ರಿ ಗಡಿಯಲ್ಲಿ ಅಂತರ್ಜಾಲ ಸೇವೆ ರದ್ದು ಮಾಡುವ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಎಂಹೆಚ್ಎ ತಿಳಿಸಿದೆ.
ವಿವಿಧ ರೈತ ಸಂಘಟನೆಗಳು ಇಂದು ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಚಕ್ಕಾ ಜಾಮ್ (ಹೆದ್ದಾರಿ ಬಂದ್) ಮಾಡಿ ಪ್ರತಿಭಟಿಸಲು ಕರೆ ನೀಡಿದ್ದವು.
ಇದನ್ನೂ ಓದಿ: ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣ: ಅರ್ನಬ್ ಗೋಸ್ವಾಮಿಗೆ ಅಲಿಬಾಗ್ ಕೋರ್ಟ್ ಚಾಟಿ..!