ETV Bharat / bharat

ಬಿಹಾರದಲ್ಲಿ ಲವ್ ಜಿಹಾದ್ ವಿರುದ್ಧದ ಕಾನೂನು ಜಾರಿಗೊಳಿಸಿ: ಸರ್ಕಾರಕ್ಕೆ ಗಿರಿರಾಜ್ ಸಿಂಗ್ ಆಗ್ರಹ

author img

By

Published : Nov 21, 2020, 4:54 PM IST

ಬಿಹಾರದಲ್ಲಿ ಸಾಮಾಜಿಕ ಸಾಮರಸ್ಯ ಸರಿಯಾಗಿ ನಡೆಯಬೇಕು ಎಂದರೆ, ರಾಜ್ಯದಲ್ಲಿ ಲವ್​ ಜಿಹಾದ್ ವಿರುದ್ಧ ಕಾನೂನು ಜಾರಿಗೊಳಿಸಿ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಆಗ್ರಹಿಸಿದ್ದಾರೆ.

Giriraj
ಗಿರಿರಾಜ್ ಸಿಂಗ್

ಪಾಟ್ನಾ(ಬಿಹಾರ): ಬಿಹಾರದಲ್ಲಿ ಲವ್ ಜಿಹಾದ್ ವಿರುದ್ಧದ ಕಾನೂನು ಜಾರಿಗೆ ತರಲು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಬಿಹಾರ ಸರ್ಕಾರವು ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತಂದರೆ ಅದು ಒಂದು ದೊಡ್ಡ ಉಪ ಕ್ರಮವಾಗಿದೆ. ಸಿಎಂ ನಿತೀಶ್ ಕುಮಾರ್ ಅವರಿಗೆ ಇದನ್ನು ಮಾಡಲು ನಾನು ಮನವಿ ಮಾಡುತ್ತೇನೆ, ಎಂದು ಸಿಂಗ್ ಹೇಳಿದ್ದಾರೆ.

ಲವ್ ಜಿಹಾದ್‌ಗೂ ಕೋಮುವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ ಅವರು, ಬಿಹಾರದಲ್ಲಿ ಈ ಕಾನೂನು ಜಾರಿಗೆ ಬಂದರೆ ಅದು ಸಾಮಾಜಿಕ ಸಾಮರಸ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದರು.

"ಲವ್ ಜಿಹಾದ್ ಹಿಂದೂ ಸಮುದಾಯದ ಮೇಲೆ ಪರಿಣಾಮ ಬೀರುತ್ತಿದೆ. ಆದರೆ, ಇದು ನಮ್ಮ ದೇಶದ ಅಲ್ಪಸಂಖ್ಯಾತ ಸಮುದಾಯಗಳ ಮೇಲೂ ಪರಿಣಾಮ ಬೀರುತ್ತಿದೆ. ಕೇರಳದಲ್ಲಿ ಕ್ರಿಶ್ಚಿಯನ್ನರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಹಾಗೂ ಅವರು ಕೂಡ ಆತಂಕಕ್ಕೊಳಗಾಗಿದ್ದಾರೆ. ಅಲ್ಲದೇ ಅದರ ಬಗ್ಗೆ ಕಳವಳವನ್ನೂ ವ್ಯಕ್ತಪಡಿಸಿದ್ದಾರೆ. ಕ್ರಿಶ್ಚಿಯನ್ ಹುಡುಗಿಯರನ್ನು ಸಹ ಗುರಿಯಾಗಿಸಿ ಹಲ್ಲೆ ಮಾಡಲಾಗುತ್ತಿದೆ ಎಂದು ಸಿಂಗ್ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.