ಬಿಲಾಸ್ಪುರ (ಛತ್ತೀಸ್‌ಗಢ): ಇಲ್ಲಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಅತ್ಯಾಚಾರಕ್ಕೊಳಗಾದ ಮಹಿಳೆಯೊಬ್ಬರು ಘಟನೆಯಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಗುರುತಿಸಿದ್ದಾರೆ.
ಘಟನೆ ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಬಳಿಕ ಇಬ್ಬರು ಆರೋಪಿಗಳನ್ನು ಗುರುತಿಸಲು ಆಸ್ಪತ್ರೆಗೆ ಕರೆದೊಯ್ದಾಗ, ತನ್ನ ಮೇಲೆ ಅತ್ಯಾಚಾರ ಎಸಗಿದ ಪಾಪಿಗಳು ಇವರೇ ಎಂದು ಸಂತ್ರಸ್ತೆ ಗುರುತಿಸಿದ್ದಾಳೆ. ಅಲ್ಲದೇ ಇಬ್ಬರಿಗೂ ಕಠಿಣ ಶಿಕ್ಷೆ ವಿಧಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾಳೆ.
ವರದಿಗಳ ಪ್ರಕಾರ, ಮೇ 23 ರ ಮಧ್ಯರಾತ್ರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯನ್ನು ಒಂದೇ ಆಸ್ಪತ್ರೆಯ ಇಬ್ಬರು ವಾರ್ಡ್ ಹುಡುಗರು ಐಸಿಯುನಲ್ಲಿ ಅತ್ಯಾಚಾರ ಮಾಡಿದ್ದಾರೆ. ಆಕೆಯ ತಂದೆ ದೂರು ದಾಖಲಿಸಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಈ ಸಂಬಂಧ ಸ್ಥಳೀಯ ಪೊಲೀಸರು ಇಬ್ಬರು ವಾರ್ಡ್ ಹುಡುಗರನ್ನು ಬಂಧಿಸಿದ್ದಾರೆ.
ಘಟನೆಯಲ್ಲಿ ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದ್ದ ಕಾರಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯ ಖಾಸಗಿ ಭಾಗಗಳಲ್ಲಿ ತೀವ್ರವಾದ ರಕ್ತ ಸ್ರಾವ ಉಂಟಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಸ್ಥಳೀಯ ಶಾಸಕ ಸೈಲೇಶ್ ಪಾಂಡೆ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ, ತ್ವರಿತ ನ್ಯಾಯ ಒದಗಿಸುವುದಾಗಿ ಕುಟುಂಬಕ್ಕೆ ಭರವಸೆ ನೀಡಿದರು. ರಾಜ್ಯ ಆರೋಗ್ಯ ಸಚಿವ ಟಿ.ಎಸ್.ಸಿಂಗ್ ಡಿಯೋ ಅವರು ಸಂತ್ರಸ್ತೆಯ ಆರೋಗ್ಯವನ್ನು ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಮತ್ತು ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯಕ್ಕಾಗಿ ಭರವಸೆ ನೀಡಿದರು.