ಹೈದರಾಬಾದ್: ಕೊರೊನಾ ವೈರಸ್ ಸೋಂಕು ಈವರೆಗೆ 87,50,501(87.50 ಲಕ್ಷ)ಕ್ಕೂ ಹೆಚ್ಚು ಜನರಿಗೆ ತಗುಲಿದ್ದು, ವಿಶ್ವಾದ್ಯಂತ 4,61,813 (4.61ಲಕ್ಷ) ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈವರೆಗೆ 46,20,355ಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ.
ವೈರಸ್ ಹರಡುವುದನ್ನು ತಡೆಗಟ್ಟಲು ಕಠಿಣ ಕ್ರಮಗಳು ಜಾರಿಯಲ್ಲಿರುವ ಕಾರಣ ಚೀನಾದ ರಾಜಧಾನಿಯಲ್ಲಿ ಹೊಸ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಕುಸಿತ ಕಂಡಿದೆ.
ಬೀಜಿಂಗ್‌ನಲ್ಲಿ ಇಂದು 22 ಹೊಸ ಪ್ರಕರಣಗಳು ಮತ್ತು ದೇಶದ ಇತರ ಪ್ರದೇಶಗಳಲ್ಲಿ 5 ಹೊಸ ಪ್ರಕರಣಗಳು ದೃಢಪಟ್ಟಿವೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ. ಒಟ್ಟು 308 ಜನ ಆಸ್ಪತ್ರೆಯಲ್ಲಿ ಕೋವಿಡ್-19 ಚಿಕಿತ್ಸೆ ಪಡೆಯುತ್ತಿದ್ದಾರೆ.
ಚೀನಾದಲ್ಲಿ ಕಳೆದ ವಾರ ಒಟ್ಟು 205 ಜನರಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ್ದು, ಅವರಲ್ಲಿ ಇಬ್ಬರು ಗಂಭೀರ ಅಸ್ವಸ್ಥರಾಗಿದ್ದು, 11 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ.