ಹೈದರಾಬಾದ್: ಜಗತ್ತಿನಲ್ಲಿ ಕೋವಿಡ್ ಮಹಾಮಾರಿ 2,74,79,200 ಜನರಿಗೆ ತಗುಲಿದ್ದು, 8,96,421 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಸೋಂಕಿತರ ಪೈಕಿ ಅರ್ಧಕ್ಕೂ ಹೆಚ್ಚು ಅಂದರೆ 1,95,73,099 ಮಂದಿ ಗುಣಮುಖರಾಗಿದ್ದಾರೆ.
ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕಾದಲ್ಲಿ ಸೋಂಕಿತರ ಸಂಖ್ಯೆ 64,85,575 ಇದ್ದು, ಮೃತರ ಸಂಖ್ಯೆ 1,93,534ಕ್ಕೆ ಏರಿಕೆಯಾಗಿದೆ.
ಮೊನ್ನೆಯವರೆಗೂ ಮೂರನೇ ಸ್ಥಾನದಲ್ಲಿದ್ದ ಭಾರತ ಕೋವಿಡ್ ಪ್ರಕರಣಗಳ ಪೈಕಿ ಬ್ರೆಜಿಲ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದಿದೆ. ಬ್ರೆಜಿಲ್ನಲ್ಲಿ 41,47,794 ಪ್ರಕರಣಗಳು ಹಾಗೂ 1,27,001 ಸಾವುಗಳು ವರದಿಯಾಗಿದ್ದರೆ, ಭಾರತದಲ್ಲಿ ಸೋಂಕಿತರ ಸಂಖ್ಯೆ 42,77,584 ಹಾಗೂ ಮೃತರ ಸಂಖ್ಯೆ 72,816ಕ್ಕೆ ಏರಿಕೆಯಾಗಿದೆ.
4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 10,30,690 ಕೇಸ್ಗಳಿದ್ದು, 17,871 ಜನರು ಸಾವನ್ನಪ್ಪಿದ್ದಾರೆ. ಒಟ್ಟು 188 ರಾಷ್ಟ್ರಗಳು ಕೋವಿಡ್ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ ಪೀಡಿತ ವಿಶ್ವದ ಟಾಪ್ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.
ಕೋವಿಡ್ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಬೆರಳೆಣಿಕೆಯಷ್ಟು ಕೇಸ್ಗಳು ಪತ್ತೆಯಾಗುತ್ತಿವೆ. 2019ರ ಡಿಸೆಂಬರ್ನಿಂದ ಈವರೆಗೆ ಚೀನಾದಲ್ಲಿ 85,144 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.