ಹೈದರಾಬಾದ್: ಭೂಮಂಡಲದಲ್ಲಿ ಬರೋಬ್ಬರಿ 3,95,93,953 ಜನರಿಗೆ ಮಾರಣಾಂತಿಕ ಕೊರೊನಾ ವೈರಸ್ ಅಂಟಿದ್ದು, 11,09,252 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಸೋಂಕಿತರ ಪೈಕಿ ಸುಮಾರು 3 ಕೋಟಿ (2,96,61,167) ಮಂದಿ ಗುಣಮುಖರಾಗಿದ್ದಾರೆ.
ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 82,88,278 ಇದ್ದು, ಮೃತರ ಸಂಖ್ಯೆ 2,23,644ಕ್ಕೆ ಏರಿಕೆಯಾಗಿದೆ.
ಕೇಸ್ಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಈವರೆಗೆ 74,32,680 ಕೇಸ್ಗಳು ಪತ್ತೆಯಾಗಿದ್ದು, 1,13,032 ಜನರು ವೈರಸ್ಗೆ ಬಲಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್ನಲ್ಲಿ 52,01,570 ಪ್ರಕರಣಗಳು ಹಾಗೂ 1,53,229 ಸಾವುಗಳು ವರದಿಯಾಗಿವೆ.
4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 13,69,313 ಕೇಸ್ಗಳಿದ್ದು, 23,723 ಜನರು ಸಾವನ್ನಪ್ಪಿದ್ದಾರೆ. ಒಟ್ಟು 188 ರಾಷ್ಟ್ರಗಳು ಕೋವಿಡ್ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ ಪೀಡಿತ ವಿಶ್ವದ ಟಾಪ್ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.
ಕೋವಿಡ್ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಬೆರಳೆಣಿಕೆಯಷ್ಟು ಕೇಸ್ಗಳು ಪತ್ತೆಯಾಗುತ್ತಿವೆ. 2019ರ ಡಿಸೆಂಬರ್ನಿಂದ ಈವರೆಗೆ ಚೀನಾದಲ್ಲಿ 85,659 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.