ಹೈದರಾಬಾದ್: ಕೊರೊನಾ ವೈರಸ್ ಹಾವಳಿ ಮುಂದುವರೆದಿದ್ದು, ಪ್ರಪಂಚದಾದ್ಯಂತ 7,83,90,945ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. 17,24,496 ಕ್ಕೂ ಹೆಚ್ಚು ಸೋಂಕಿತರು ಸಾವನ್ನಪ್ಪಿದ್ದು, ಈವರೆಗೆ 5,51,54,878 ಕ್ಕೂ ಹೆಚ್ಚು ಮಂದಿ ಚೇತರಿಸಿಕೊಂಡಿದ್ದಾರೆ.
ಯುಎಸ್ ಕೊರೊನಾ ಮಹಾಮಾರಿಗೆ ಹೆಚ್ಚು ಹಾನಿಗೊಳಗಾದ ರಾಷ್ಟ್ರವಾಗಿದೆ. 1,86,84,628ಕ್ಕಿಂತ ಹೆಚ್ಚು ಕೊರೊನಾ ಪ್ರಕರಣಗಳು ಕಂಡುಬಂದಿದ್ದು, 3,30,824 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.
ಕೊರೊನಾ ಸೋಂಕಿಗೆ ಕಂಡು ಹಿಡಿಯಲಾಗಿರುವ ಲಸಿಕೆಯನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ನಿನ್ನೆ ಪಡೆದುಕೊಂಡಿದ್ದು, ಲಸಿಕೆಯ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಅಮೆರಿಕನ್ನರು ಜಾಗರೂಕರಾಗಿರಲು ಮನವಿ ಮಾಡಿದ್ದಾರೆ.
ಇನ್ನು ದಿನದಿಂದ ದಿನಕ್ಕೆ ಕೊರೊನಾ ಉಲ್ಬಣಗೊಳ್ಳುತ್ತಿದ್ದು, ಆರ್ಥಿಕತೆಯ ಮೇಲೆ ನಕರಾತ್ಮಕ ಪರಿಣಾಮ ಬೀರಿದೆ. ಈ ಹಿನ್ನೆಲೆ COVID-19 ಪರಿಹಾರ ಪ್ಯಾಕೇಜ್ ನಲ್ಲಿ ಕೆಲ ಬದಲಾವಣೆಗಳನ್ನು ತರಬೇಕೆಂದು ಡೊನಾಲ್ಡ್ ಟ್ರಂಪ್ ಒತ್ತಾಯಿಸಿದ್ದಾರೆ.