ETV Bharat / bharat

ಗೋವಾ ಕಾಂಗ್ರೆಸ್ ಮುಖ್ಯಸ್ಥ ಗಿರೀಶ್ ಚೋಡಂಕರ್ ರಾಜೀನಾಮೆ - ಗೋವಾ ಜಿಲ್ಲಾ ಪಂಚಾಯತ್ ಚುನಾವಣೆ

ಇತ್ತೀಚೆಗೆ ನಡೆದ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗ್ತಿದೆ.

ಗೋವಾ ಕಾಂಗ್ರೆಸ್ ಮುಖ್ಯಸ್ಥ ಗಿರೀಶ್ ಚೋಡಂಕರ್
ಗೋವಾ ಕಾಂಗ್ರೆಸ್ ಮುಖ್ಯಸ್ಥ ಗಿರೀಶ್ ಚೋಡಂಕರ್
author img

By

Published : Dec 17, 2020, 12:38 PM IST

ಪಣಜಿ (ಗೋವಾ): ಇತ್ತೀಚೆಗೆ ನಡೆದ ಜಿಲ್ಲಾ ಪಂಚಾಯತ್​​ ಚುನಾವಣೆಯಲ್ಲಿ ಕಾಂಗ್ರೆಸ್​ ಸೋತಿರುವ ಕಾರಣ ಗೋವಾ ಕಾಂಗ್ರೆಸ್​ ಮುಖ್ಯಸ್ಥ ಗಿರೀಶ್​ ಚೋಡಂಕರ್​ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಗಿರೀಶ್​ ಚೋಡಂಕರ್​ ಅವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಡಿಸೆಂಬರ್ 12 ರಂದು ಜಿಲ್ಲಾ ಪಂಚಾಯತ್‌ನ ಒಟ್ಟು 39 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಈ ವೇಳೆ ಕಾಂಗ್ರೆಸ್​ ಕೇವಲ ನಾಲ್ಕು ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡು ಹೀನಾಯ ಸೋಲು ಅನುಭವಿಸಿತ್ತು. ಬಿಜೆಪಿ 33 ಸ್ಥಾನಗಳನ್ನು ಗೆದ್ದಿತ್ತು.

ಓದಿ: ಡ್ರಗ್ ಕೇಸ್​: ಆದಿತ್ಯಾ ಆಳ್ವಾ ಜಾಮೀನು ಅರ್ಜಿ ವಿಚಾರಣೆ ನಿರಾಕರಿಸಿದ ಸುಪ್ರೀಂಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.