ETV Bharat / bharat

ಚಿನ್ನದ ಕಳ್ಳಸಾಗಣೆ ಪ್ರಕರಣ: ಸ್ವಪ್ನಾ ಸುರೇಶ್ ಜಾಮೀನು ಅರ್ಜಿ ವಜಾ - ಸ್ವಪ್ನಾ ಸುರೇಶ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ

ಅಕ್ರಮ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೇರಳದ ಸ್ವಪ್ನಾ ಸುರೇಶ್ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

Swapna Suresh
ಸ್ವಪ್ನಾ ಸುರೇಶ್
author img

By

Published : Aug 21, 2020, 3:38 PM IST

ಎರ್ನಾಕುಲಂ(ಕೇರಳ): ದುಬೈನಿಂದ ಭಾರತಕ್ಕೆ ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸ್ವಪ್ನಾ ಸುರೇಶ್ ಅವರ ಜಾಮೀನು ಅರ್ಜಿಯನ್ನು ಎರ್ನಾಕುಲಂ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.

ಈ ಪ್ರಕರಣದಲ್ಲಿ ನನ್ನದೇನು ತಪ್ಪಿಲ್ಲ, ಇದರಲ್ಲಿ ಬೇರೆಯವರ ಕೈವಾಡವಿದೆ. ಆದ್ದರಿಂದ ನನಗೆ ಜಾಮೀನು ನೀಡಬೇಕು ಎಂದು ಸ್ವಪ್ನಾ ಸುರೇಶ್​​ ಜಾಮೀನು ಕೋರಿ ಕೋರ್ಟ್​ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಪ್ರಕರಣದ ತನಿಖೆ ಆರಂಭಿಕ ಹಂತದಲ್ಲಿರುವುದರಿಂದ ಆರೋಪಿ ಜಾಮೀನು ಪಡೆಯಲು ಅರ್ಹರಾಗಿಲ್ಲವೆಂದು ನ್ಯಾಯಾಲಯ ಆದೇಶ ಹೊರಡಿಸಿದೆ.

ಚಿನ್ನ ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಬಗ್ಗೆ ಸ್ವತಃ ಸ್ವಪ್ನಾ ಒಪ್ಪಿಕೊಂಡಿರುವುದಾಗಿ ಇಡಿ ಹೇಳಿಕೆ ನೀಡಿದೆ ಎಂದು ನ್ಯಾಯಾಲಯ ಉಲ್ಲೇಖಿಸಿದೆ.

ಸ್ವಪ್ನಾ ಸುರೇಶ್​​ ಓರ್ವ ಪ್ರಭಾವಿ ವ್ಯಕ್ತಿಯಾಗಿದ್ದು, ಒಂದೊಮ್ಮೆ ಜಾಮೀನು ನೀಡಿದರೆ ಸಾಕ್ಷ್ಯ ನಾಶಕ್ಕೆ ಕಾರಣವಾಗುತ್ತದೆ ಎಂದು ಇಡಿ ಹೇಳಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.