ತಿರುವನಂತಪುರಂ (ಕೇರಳ): ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ತನಿಖೆಯ ಭಾಗವಾಗಿ ಕಸ್ಟಮ್ಸ್ ಅಧಿಕಾರಿಗಳು, ತಿರುವನಂತಪುರಂ ವಿಮಾನ ನಿಲ್ದಾಣ ಆವರಣದ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡುವಂತೆ ಕೋರಿದ್ದರು. ಆದ್ರೆ ಅಧಿಕಾರಿಗಳು ಯಾವುದೇ ದೃಶ್ಯಾವಳಿಗಳನ್ನು ಪಡೆಯಲು ಸಾಧ್ಯವಾಗಿಲ್ಲ.
ವಿಮಾನ ನಿಲ್ದಾಣದ ಆವರಣದಲ್ಲಿ ಯಾವುದೇ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಲ್ಲ. ಚಕ್ಕಾ ಬೈಪಾಸ್ ತನಕ ಮಾತ್ರ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಲ್ಲದೇ, ಕ್ಯಾಮೆರಾಗಳು ರೆಕಾರ್ಡ್ ಮಾಡಿದ ದೃಶ್ಯಗಳನ್ನು ಕೇವಲ ಒಂದು ತಿಂಗಳು ಮಾತ್ರ ಇಡಲಾಗುತ್ತದೆ. ಹಾಗಾಗಿ ಕಸ್ಟಮ್ ಅಧಿಕಾರಿಗಳು ಕೇಳಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡಲಾಗುವುದಿಲ್ಲ ಎಂದಿದ್ದಾರೆ.
ಕೇರಳದ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಚಿನ್ನದ ಕಳ್ಳಸಾಗಣೆ ಪ್ರಕರಣದ ತನಿಖೆ ನಡೆಸಲು ಗೃಹ ಸಚಿವಾಲಯವು ಗುರುವಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಅನುಮತಿ ನೀಡಿತ್ತು.