ತಿರುವನಂತಪುರ (ಕೇರಳ): ವಿವಿಧ ಹಗರಣಗಳು ಮತ್ತು ಆರೋಪಗಳಲ್ಲಿ ಸಿಲುಕಿರುವ ಪಿಣರಾಯಿ ವಿಜಯನ್ ಸರ್ಕಾರಕ್ಕೆ ಮತ್ತೊಂದು ಹೊಡೆತ ಬಿದ್ದಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕೈಗಾರಿಕಾ ಸಚಿವ ಇ.ಪಿ.ಜಯರಾಜನ್ ಮಗನ ವಿಚಾರಣೆಗೆ ಜಾರಿ ನಿರ್ದೇಶನಾಲಯ ಮುಂದಾಗಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಬಲ ಸಿಪಿಐ-ಎಂ ನಾಯಕ, ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರ ಮಗನನ್ನು ಕೂಡಾ ನಿನ್ನೆ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು.
ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತ ಮತ್ತು ಪ್ರಧಾನ ಆರೋಪಿ ಸ್ವಪ್ನಾ ಸುರೇಶ್ ಅವರ ಸಂಪರ್ಕ ಇವರಿಬ್ಬರಿಗಿದೆ ಎಂಬ ಶಂಕೆ ಪ್ರಬಲವಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಇಲಾಖೆಯು ಈ ಹಿಂದೆ ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 15 ಕೋಟಿ ರೂ.ಗಳ 30 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿತ್ತು.