ETV Bharat / bharat

ಮಹಾರಾಷ್ಟ್ರ: ಸರ್ಕಾರ ರಚಿಸುವಂತೆ ಶಿವಸೇನೆಗೆ ರಾಜ್ಯಪಾಲರ ಆಹ್ವಾನ - ಶಿವಸೇನೆಯನ್ನ ಆಹ್ವಾನಿಸಿದ ರಾಜ್ಯಪಾಲರು

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲು ಬಿಜೆಪಿ ಹಿಂದೇಟು ಹಾಕಿದ ಬೆನ್ನಲ್ಲೆ ಎರಡನೇ ದೊಡ್ಡ ಪಕ್ಷವಾದ ಶಿವಸೇನೆಗೆ ಸರ್ಕಾರ ರಚಿಸುವಂತೆ ರಾಜ್ಯಪಾಲರು ಆಹ್ವಾನ ನೀಡಿದ್ದಾರೆ.

ಶಿವಸೇನೆಗೆ ರಾಜ್ಯಪಾಲರಿಂದ ಆಹ್ವಾನ
author img

By

Published : Nov 10, 2019, 8:32 PM IST

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಎರಡನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಶಿವಸೇನೆ ಪಕ್ಷಕ್ಕೆ ಸರ್ಕಾರ ರಚನೆ ಮಾಡುವಂತೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಆಹ್ವಾನ ನೀಡಿದ್ದಾರೆ.

  • Office of Maharashtra Governor: Governor Bhagat Singh Koshyari today asked the leader of elected members of the second largest party, the Shiv Sena, Eknath Shinde to indicate the willingness and ability of his party to form the government in Maharashtra. pic.twitter.com/bdfKgHPj45

    — ANI (@ANI) November 10, 2019 " class="align-text-top noRightClick twitterSection" data=" ">

ಜನಾದೇಶ ಇಲ್ಲವೆಂದು ರಾಜ್ಯಪಾಲರು ನೀಡಿದ್ದ ಆಹ್ವಾನವನ್ನ ಬಿಜೆಪಿ ತಿರಸ್ಕರಿಸಿದ ಬೆನ್ನಲ್ಲೇ ಸರ್ಕಾರ ರಚಿಸುವಂತೆ ಶಿವಸೇನೆಗೆ ರಾಜ್ಯಪಾಲರು ಆಹ್ವಾನ ನೀಡಿದ್ದಾರೆ. ನಿನ್ನೆಯಷ್ಟೇ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಗೆ ಸರ್ಕಾರ ರಚನೆ ಮಾಡುವಂತೆ ಆಹ್ವಾನ ನೀಡಿದ್ದರು. ಇಂದು ಸಂಜೆ ರಾಜ್ಯಪಾಲರನ್ನ ಭೇಟಿ ಮಾಡಿದ್ದ ಬಿಜೆಪಿ ನಾಯಕರು, ಸರ್ಕಾರ ರಚನೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಇದೀಗ ಚೆಂಡು ಶಿವಸೇನೆ ಅಂಗಳದಲ್ಲಿದ್ದು, ಈ ಬಗ್ಗೆ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.

ಅಧಿಕಾರ ಹಂಚಿಕೆ ವಿಚಾರದಲ್ಲಿ ಶಿವಸೇನೆ ಮತ್ತು ಬಿಜೆಪಿ ನಡುವೆ ಒಮ್ಮತ ಮೂಡದ ಕಾರಣ ಎರಡೂ ಪಕ್ಷಗಳಲ್ಲಿ ಮೈತ್ರಿ ಸಾಧ್ಯವಾಗಲಿಲ್ಲ. ಹೀಗಾಗಿ ಯಾವ ಪಕ್ಷಕ್ಕೂ ಬಹುಮತ ಇಲ್ಲದ ಕಾರಣ ಚುನಾವಣೆ ಫಲಿತಾಂಶ ಬಂದು 15 ದಿನ ಕಳೆದರೂ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಸಾಧ್ಯವಾಗಿಲ್ಲ.

Intro:Body:Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.