ETV Bharat / bharat

ಕೇಂದ್ರದ ಮಹತ್ವದ ನಿರ್ಧಾರ: ವಿದೇಶಗಳಿಗೆ ಈರುಳ್ಳಿ ರಫ್ತು ನಿಷೇಧಿಸಿ ಆದೇಶ - ಕೇಂದ್ರದಿಂದ ಈರುಳ್ಳಿ

ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಂಡು ಬರುತ್ತಿರುವ ಕಾರಣ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

Govt bans export of onions
Govt bans export of onions
author img

By

Published : Sep 15, 2020, 2:43 AM IST

ನವದೆಹಲಿ: ತತ್​ಕ್ಷಣದಿಂದಲೇ ಜಾರಿಗೆ ಬರುವಂತೆ ವಿದೇಶಗಳಿಗೆ ಈರುಳ್ಳಿ ರಫ್ತು ಮಾಡುವುದನ್ನ ರದ್ದುಗೊಳಿಸಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಕಳೆದ ಕೆಲ ತಿಂಗಳಲ್ಲಿ ವಿವಿಧ ರಾಜ್ಯಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಈರುಳ್ಳಿ ಬೆಳೆ ಸಂಪೂರ್ಣವಾಗಿ ಹಾಳಾಗಿದ್ದು, ಹೀಗಾಗಿ ಪೂರೈಕೆ ಪ್ರಮಾಣ ಕಡಿಮೆಯಾಗಿದೆ. ಈಗಾಗಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿ ಬೆಲೆ 40 ರೂ ಆಗಿದೆ. ಈರುಳ್ಳಿ ಬೆಲೆಯ ನಿಯಂತ್ರಣ ಹಾಗೂ ಮಾರುಕಟ್ಟೆಯಲ್ಲಿ ಇದರ ಅಭಾವ ಉಂಟಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ಬಿಹಾರ ಹಾಗೂ ಗುಜರಾತ್​​ನಲ್ಲಿ ಅತಿ ಹೆಚ್ಚು ಈರುಳಿ ಬೆಳೆಯಲಾಗುತ್ತದೆ.

ಸದ್ಯ ಭಾರತದಿಂದ ಬಾಂಗ್ಲಾದೇಶ, ಮಲೇಷಿಯಾ, ಯುಎಇ ಹಾಗೂ ಶ್ರೀಲಂಕಾ ರಾಷ್ಟ್ರಗಳಿಗೆ ಈರುಳ್ಳಿ ರಫ್ತು ಮಾಡುತ್ತಿತ್ತು.ಇನ್ಮುಂದೆ ರಫ್ತು ಸ್ಥಗಿತಗೊಳ್ಳಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.