ETV Bharat / bharat

ಗಡಿ ವಿಚಾರದಲ್ಲಿ ಸರ್ಕಾರ-ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ: ಮಾಯಾವತಿ ಸಲಹೆ - ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ

ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಗಡಿ ವಿಚಾರದಲ್ಲಿ ಸರ್ಕಾರವೇ ಉತ್ತಮ ನಿರ್ಣಯ ತೆಗೆದುಕೊಳ್ಳಬೇಕು ಎಂದು ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

Mayawati on border stand off
ಮಾಯಾವತಿ ಸಲಹೆ
author img

By

Published : Jun 22, 2020, 3:51 PM IST

ಲಖನೌ: ಚೀನಾದ ಗಡಿಯಲ್ಲಿ ಉದ್ವಿಗ್ನತೆ ಇರುವ ಸಮಯದಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳು ಪ್ರಬುದ್ಧತೆ ಮತ್ತು ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್​ಪಿ) ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

ಜೂನ್ 15ರಂದು ಲಡಾಖ್‌ನಲ್ಲಿ ಚೀನಾದ ಸೇನೆಯೊಂದಿಗೆ ನಡೆದ ಘರ್ಷಣೆಯಲ್ಲಿ ಕರ್ನಲ್ ಸೇರಿದಂತೆ 20 ಮಂದಿ ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಈ ಘಟನೆಯಿಂದ ಇಡೀ ದೇಶ ದುಃಖ ಮತ್ತು ಕೋಪಗೊಂಡಿದೆ ಎಂದು ಮಾಯಾವತಿ ಹೇಳಿದ್ದಾರೆ.

  • 1. अभी हाल ही में 15 जून को लद्दाख में चीनी सेना के साथ हुए संघर्ष में कर्नल सहित 20 सैनिकों की मौत से पूरा देश काफी दुःखी, चिन्तित व आक्रोशित है। इसके निदान हेतु सरकार व विपक्ष दोनों को पूरी परिपक्वता व एकजुटता के साथ काम करना है जो देश-दुनिया को दिखे व प्रभावी सिद्ध हो। 1/2

    — Mayawati (@Mayawati) June 22, 2020 " class="align-text-top noRightClick twitterSection" data=" ">

'ಸರ್ಕಾರ ಮತ್ತು ಪ್ರತಿಪಕ್ಷಗಳು ಸಂಪೂರ್ಣ ಪ್ರಬುದ್ಧತೆ ಮತ್ತು ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ. ಈ ಮೂಲಕ ಇಡೀ ದೇಶ ಮತ್ತು ಜಗತ್ತಿಗೆ ಪರಿಣಾಮಕಾರಿ ಸಂದೇಶ ನೀಡಲು ಸಾಧ್ಯ' ಎಂದು ಟ್ವೀಟ್​ ಮಾಡಿದ್ದಾರೆ.

ಇಂತಹ ಕಷ್ಟ ಮತ್ತು ಸವಾಲಿನ ಸಮಯದಲ್ಲಿ ಭಾರತ ಸರ್ಕಾರದ ಮುಂದಿನ ಕ್ರಮಗಳಿಗೆ ಸಂಬಂಧಿಸಿದಂತೆ ಜನರು ಮತ್ತು ತಜ್ಞರ ಅಭಿಪ್ರಾಯ ವಿಭಿನ್ನವಾಗಿರಬಹುದು. ಆದರೆ ರಾಷ್ಟ್ರದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಗಡಿ ವಿಚಾರದಲ್ಲಿ ಸರ್ಕಾರವೇ ನಿರ್ಣಯ ತೆಗೆದುಕೊಳ್ಳಬೇಕು ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.