ನವದೆಹಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಆಗುತ್ತಿದ್ದರೆ, ಭಾರತ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನ ಪ್ರತಿ ಲೀಟರ್ಗೆ 3 ರೂ. ಏರಿಕೆ ಮಾಡಿ ಆದೇಶ ಹೊರಡಿಸಿದೆ.
ವಿಶೇಷ ಅಬಕಾರಿ ಸುಂಕವನ್ನ 2 ರೂ.ದಿಂದ 8 ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು ಪ್ರತಿ ಲೀಟರ್ ಡಿಸೇಲ್ ಮೇಲೆ 4 ರೂ. ಏರಿಕೆ ಮಾಡಲಾಗಿದೆ ಎಂದು ಸರ್ಕಾರ ಹೊರಡಿಸಿರುವ ನೋಟಿಫಿಕೇಷನ್ನಲ್ಲಿ ಇದೆ. ಇನ್ನು ಹೆಚ್ಚುವರಿಯಾಗಿ ರಸ್ತೆ ಸೆಸ್ ಏರಿಕೆ ಮಾಡಿದೆ. ಪ್ರತಿ ಲೀಟರ್ಗೆ ಒಂದು ರೂ. ಏರಿಕೆ ಮಾಡಲಾಗಿದೆ.