ಉತ್ತರ ಪ್ರದೇಶ: ಕೇಂದ್ರ ಸರ್ಕಾರವು ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರಬೇಕು ಮತ್ತು ಎಂಎಸ್ಪಿ ಕುರಿತಾದ ಕಾನೂನುಗಳನ್ನು ರೂಪಿಸಬೇಕು ಎಂದು ಬಿಕೆಯು ವಕ್ತಾರ ರಾಕೇಶ್ ಟಿಕೈಟ್ ಒತ್ತಾಯಿಸಿದ್ದಾರೆ.
ಕೃಷಿ ಕಾಯ್ದೆಗಳ ರದ್ಧತಿ ಕುರಿತು ರೈತ ಮುಖಂಡರು ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಇಂದು ನಡೆಯುತ್ತಿರುವ 7ನೇ ಸುತ್ತಿನ ಮಾತುಕತೆಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚಿಸಬೇಕಾಗಿದೆ. ರೈತರು ಈ ಚಳವಳಿಯನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ರೈತ ವಿರೋಧಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು. ಜೊತೆಗೆ ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರಬೇಕು ಮತ್ತು ಎಂಎಸ್ಪಿ ಕುರಿತಾದ ಕಾನೂನುಗಳನ್ನು ರೂಪಿಸಬೇಕು ಎಂದರು.
ಕೇಂದ್ರ ಸರ್ಕಾರ ಜಾರಿಗೊಳಿರುವ ನೂತನ ಕೃಷಿ ಕಾನೂನುಗಳ ರದ್ದತಿಗಾಗಿ ದೆಹಲಿಯ ಗಡಿಯಲ್ಲಿ ಸುಮಾರು ಒಂದು ತಿಂಗಳಿನಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಸರ್ಕಾರ ರೈತರೊಂದಿಗೆ 6 ಸುತ್ತಿನ ಮಾತುಕತೆ ನಡೆಸಿದರೂ ಕೇಂದ್ರದಿಂದ ನಿರೀಕ್ಷಿತ ಫಲ ಸಿಕ್ಕಿಲ್ಲ. ಹೀಗಾಗಿ ಇಂದು 7ನೇ ಸುತ್ತಿನ ಮಾತುಕತೆ ವಿಜ್ಞಾನ ಭವನದಲ್ಲಿ ನಡೆಯಲಿದೆ.