ನವದೆಹಲಿ: ಕೇಂದ್ರ ಸರ್ಕಾರವು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಅದು 65 ಕೋಟಿ ಭಾರತೀಯರ ಜೀವನದ ಮೇಲೆ ತೀವ್ರ ಸ್ವರೂಪದ ಪರಿಣಾಮ ಬೀರುತ್ತದೆ ಎಂದು ಕೇಂದ್ರ ಮಾಜಿ ಸಚಿವ ಮತ್ತು ಆನಂದಪುರ ಸಾಹಿಬ್ ಕ್ಷೇತ್ರದ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಹೇಳಿದ್ದಾರೆ.
"ಇದೀಗ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿಲ್ಲ. ಇದು 1952ರ ನಂತರ ಮೊದಲ ಬಾರಿಗೆ ಈ ರೀತಿ ನಡೆಯುತ್ತಿದೆ. ಅಷ್ಟೇ ಅಲ್ಲದೆ, ಚೀನಾ ದೇಶ ನಮ್ಮ ಭೂಪ್ರದೇಶವನ್ನು ಆಕ್ರಮಿಸಿಕೊಂಡಿದೆ. ಅದರ ಬಗ್ಗೆ ಯಾವುದೇ ಸ್ಪಷ್ಟತೆಯಿಲ್ಲ. ಇನ್ನು ದೇಶದ ಆರ್ಥಿಕತೆಯೂ ಕುಸಿಯುತ್ತಿದೆ. ಕೇಂದ್ರ ಸರ್ಕಾರ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು" ಎಂದಿದ್ದಾರೆ.
ಓದಿ: ಕೇಂದ್ರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಭಾರತ್ ಬಂದ್ : ಎಲ್ಲೆಲ್ಲೂ ಖಾಕಿ ಸರ್ಪಗಾವಲು
ದೆಹಲಿ, ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದ ಅಂತರರಾಜ್ಯ ಗಡಿಯಲ್ಲಿ ಲಕ್ಷಾಂತರ ರೈತರು ಜಮಾಯಿಸಿ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.