ETV Bharat / bharat

ವಾಗ್ವಾದ ನಡೆಯುತ್ತಿದ್ದ ವೇಳೆ ಗುಂಡು ಹಾರಿಸಿದ ವ್ಯಕ್ತಿ: ಬಾಲಕನಿಗೆ ಗಾಯ

author img

By

Published : May 23, 2020, 9:13 AM IST

ವಾಗ್ವಾದ ನಡೆಯುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದು, ಗುಜರಾತ್‌ನ ಸೂರತ್ ನಗರದ ಬಾಲಕನೊಬ್ಬ ಗಾಯಗೊಂಡಿದ್ದಾನೆ.

injured
injured

ಸೂರತ್ (ಗುಜರಾತ್‌): ನಗರದಲ್ಲಿ ವಾಗ್ವಾದ ನಡೆಯುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಪರಿಣಾಮ 16 ವರ್ಷದ ಬಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ಉಧಾನಾ ಪ್ರದೇಶದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಗುಂಡು ಹಾರಿಸಿದ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ಆರೋಪಿ ಧರ್ಮೇಂದ್ರ ಸಿಂಗ್ ಈ ಪ್ರದೇಶದಲ್ಲಿ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ. ಈ ಘಟನೆಯ ಬಳಿಕ ಆತನನ್ನು ವಶಕ್ಕೆ ಪಡೆದಿದ್ದೇವೆ" ಎಂದು ಸಹಾಯಕ ಪೊಲೀಸ್ ಆಯುಕ್ತ ಎ.ಎಂ.ಪರ್ಮಾರ್ ಹೇಳಿದ್ದಾರೆ.

ಗಾಯಗೊಂಡ ಬಾಲಕ ಪ್ರಸ್ತುತ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಮನ್ಹಾರ್ ಪಟೇಲ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.