ಲಕ್ನೋ: ಇತ್ತೀಚೆಗಷ್ಟೇ ಸೇವೆಯಿಂದ ಸ್ವಯಂಪ್ರೇರಿತ ನಿವೃತ್ತಿ ಪಡೆದಿದ್ದ ಗುಜರಾತ್ ಕೇಡರ್ ಐಎಎಸ್ ಅಧಿಕಾರಿ ಎ ಕೆ ಶರ್ಮಾ ಬಿಜೆಪಿಗೆ ಸೇರಿಕೊಂಡಿದ್ದಾರೆ.
ಉತ್ತರ ಪ್ರದೇಶದ ಮೌ ಜಿಲ್ಲೆಯ 1988 ರ ಬ್ಯಾಚ್ ಅಧಿಕಾರಿಯಾಗಿದ್ದ ಕೆ. ಶರ್ಮಾ, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ 20 ವರ್ಷಗಳಿಂದ ನಿಕಟವಾಗಿ ಸಂಪರ್ಕದಲ್ಲಿದ್ದಾರೆ. ಈ ಹಿನ್ನೆಲೆ ಇವರಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸಬಹುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್, ಐಎಎಸ್ ಮಾಜಿ ಅಧಿಕಾರಿ ಅರವಿಂದ್ ಕುಮಾರ್ ಶರ್ಮಾ ಅವರನ್ನು ಬಿಜೆಪಿ ಕುಟುಂಬದಿಂದ ಸ್ವಾಗತಿಸಲಾಯಿತು. ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಸಿದ್ಧಾಂತದೊಂದಿಗೆ ಸಂಬಂಧ ಹೊಂದಿರುವ ಶರ್ಮಾ ಅವರ ಸಾಮರ್ಥ್ಯಗಳು ಮತ್ತು ಸಮರ್ಪಣೆಯೊಂದಿಗೆ ಪಕ್ಷವು ಖಂಡಿತವಾಗಿಯೂ ಹೊಸ ರೂಪವನ್ನು ಪಡೆಯುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ಈಟಿವಿ ಭಾರತದೊಂದಿಗೆ ಮಾತನಾಡಿದ ಶರ್ಮಾ, ನಾನು ಯಾವುದೇ ರಾಜಕೀಯ ಕುಟುಂಬಕ್ಕೆ ಸೇರಿದವನಲ್ಲ. ಪಿಎಂ ಮೋದಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಪಕ್ಷದ ಕಲ್ಯಾಣಕ್ಕಾಗಿ ನಾನು ಕೆಲಸ ಮಾಡುತ್ತೇನೆ ಎಂದರು.