ನವದೆಹಲಿ : ಮಹಿಳೆಯರ ಮೇಲಿನ ದೌರ್ಜನ್ಯವನ್ನು ಕೊನೆಗೊಳಿಸಲು ಮರಣದಂಡನೆ ಎಂದಿಗೂ ಪರಿಹಾರವಲ್ಲ ಎಂದು ಮಾನವ ಹಕ್ಕುಗಳಿಗಾಗಿ ಹೋರಾಡುವ ಸರ್ಕಾರೇತರ ಸಂಸ್ಥೆ ಅಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾ ಹೇಳಿದೆ.
ಮುಖೇಶ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ ಸಿಂಗ್ (31) 2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾಗಿದ್ದರು. ಇಂದು ಬೆಳಿಗ್ಗೆ 5.30 ಕ್ಕೆ ದೆಹಲಿಯ ತಿಹಾರ್ ಜೈಲಿನಲ್ಲಿ ನಾಲ್ವರನ್ನು ಗಲ್ಲಿಗೇರಿಸಲಾಯಿತು.
ಮರಣದಂಡನೆ ಎಂದಿಗೂ ಪರಿಹಾರವಲ್ಲ. ಇಂದಿನ ಮರಣದಂಡನೆ ಭಾರತದ ಮಾನವ ಹಕ್ಕುಗಳ ದಾಖಲೆಯಲ್ಲಿ ಕರಾಳ ಕಲೆಯಾಗಿ (Dark stain) ಸೇರುತ್ತದೆ ಎಂದು ಅಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಅವಿನಾಶ್ ಕುಮಾರ್ ಹೇಳಿದರು.
ಲಿಂಗ ಆಧಾರಿತ ಹಿಂಸಾಚಾರವನ್ನು ಕಡಿಮೆ ಮಾಡಲು, ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ತನಿಖೆಗಳನ್ನು ಸುಧಾರಿಸುವುದು, ದೀರ್ಘಕಾಲೀನ ಪರಿಹಾರಗಳನ್ನು ಕಂಡುಕೊಳ್ಳುವ ಬದಲು ಮರಣ ದಂಡನೆ ವಿಧಿಸುವುದು ಸರಿಯಲ್ಲ ಎಂದು ಅವಿನಾಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.