ದಾಹೋಡ್: ಪತಿ ಮತ್ತು ಅಳಿಯಂದಿರ ಕಿರುಕುಳದಿಂದ ಬೇಸತ್ತ 32 ವರ್ಷದ ಮಹಿಳೆಯೋರ್ವಳು ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಜರಾತಿನ ದಾಹೋಡ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ನಾನಾ ಸರ್ನೈಯಾ ಎಂಬ ಹಳ್ಳಿಯಲ್ಲಿ ಈ ದುರ್ಘಟನೆ ನಡೆದಿದೆ. ಪತಿ ಮತ್ತು ಅಳಿಯಂದಿರ ಕಿರುಕುಳ ತಾಳಲಾರದೇ ತನ್ನ ಮೂರು ತಿಂಗಳ ಮಗ ಮತ್ತು ಐದು ವರ್ಷದ ಮಗಳನ್ನು ಬಾವಿಗೆ ಎಸೆದ ಸರಸ್ವತಿ ದಾಮೋರ್ ಎಂಬ ಮಹಿಳೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ.
ಮೃತ ಮಹಿಳೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಸೆಕ್ಷನ್ 498 (ಬಿ) ಮತ್ತು ಐಪಿಸಿಯ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪತಿ ಮತ್ತು ಅಳಿಯಂದಿರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಫತೇಪುರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರ ಶವಗಳನ್ನು ಬಾವಿಯಿಂದ ಹೊರತೆಗೆಯಲಾಗಿದ್ದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.