ಅಹಮದಾಬಾದ್: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ 21,000 ರೂಪಾಯಿ ದೇಣಿಗೆ ನೀಡಿದ್ದಾರೆ.
ಧರ್ಮದ ಬಗ್ಗೆ ತಮಗೆ ಅಪಾರವಾದ ನಂಬಿಕೆ ಇದ್ದರೂ ಏಕದೃಷ್ಟಿ ಹೊಂದಿಲ್ಲ. ಈ ದೇವಾಲಯ ನಿರ್ಮಾಣ ದೇಶದಲ್ಲಿ ರಾಮ ರಾಜ್ಯ ನಿರ್ಮಿಸಲು ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಟ್ಟಿದ್ದಾರೆ.
ಪಾಟೀದಾರ್ ಸಮುದಾಯದ ಹೋರಾಟಗಾರ ಹಾರ್ದಿಕ್ ಪಟೇಲ್ ಕಳೆದ ಕೆಲ ದಿನಗಳ ಹಿಂದೆ ಗುಜರಾತ್ ಕಾಂಗ್ರೆಸ್ ಘಟಕದ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕವಾಗಿದ್ದರು.