ನವದೆಹಲಿ: ಪಾಟಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ ಹಾರ್ದಿಕ್ ಪಟೇಲ್ ಮಾರ್ಚ್ 12ರಂದು 'ಕೈ' ಹಿಡಿಯಲಿದ್ದು, ಜಾಮ್ನಗರ್ ಕ್ಷೇತ್ರದಿಂದ ಲೋಕಸಭಾ ಚುನಾವಣೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.
ಪೂನಮ್ಬೆನ್ ಮಾಡಮ್ ಜಾಮ್ನಗರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದು, ಹಾರ್ದಿಕ್ ಇವರಿಗೆ ಸ್ಪರ್ಧೆ ನೀಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.