ಉನ್ನಾವೊ(ಉತ್ತರ ಪ್ರದೇಶ): ಆಗ್ರಾ-ಲಖನೌ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕಾರಿನ ಟೈರ್ ಸ್ಫೋಟಗೊಂಡು ಮತ್ತೊಂದು ಬದಿಯಲ್ಲಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ ಎಂದು ಉನ್ನಾವೊ ಎಸ್ಪಿ ವಿಕ್ರಾಂತ್ ವೀರ್ ಸಿಂಗ್ ತಿಳಿಸಿದ್ದಾರೆ. ಲಾರಿಗೆ ಡಿಕ್ಕಿ ಹೊಡೆದಾಗ ಕಾರಿಗೆ ಬೆಂಕಿ ಹೊತ್ತಿಕೊಂಡು ಅದರಲ್ಲಿದ್ದ ಎಲ್ಲ 7 ಮಂದಿ ಸಜೀವ ದಹನವಾಗಿದ್ದಾರೆ. ಮೃತರ ಗುರುತು ಪತ್ತೆಯಾಗಬೇಕಿದೆ ಎಂದು ಎಸ್ಪಿ ಹೇಳಿದ್ದಾರೆ.
ಈ ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸಿಎಂ ಯೋಗಿ ಆದಿತ್ಯಾನಾಥ್ ಅವರು, ಮೃತರ ಕುಟುಂಬಸ್ಥರಿಗೆ ಎಲ್ಲ ರೀತಿಯ ಸಹಾಯ ಮತ್ತು ಪರಿಹಾರ ನೀಡುವಂತೆ ಉನ್ನಾವೊ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.