ETV Bharat / bharat

ದೇಶದ ಎಲ್ಲರಿಗೂ ಕೊರೊನಾ ಲಸಿಕೆ ಉಚಿತ: ಕೇಂದ್ರ ಸಚಿವ ಡಾ.ಹರ್ಷವರ್ಧನ್ - ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ ಸಿಂಗ್ ಮಾತು

ಭಾರತದಾದ್ಯಂತ ಉಚಿತವಾಗಿ ಕೊರೊನಾ ಲಸಿಕೆ ಹಂಚಿಕೆ ಮಾಡಲಾಗುವುದು. ದೇಶದ ಜನರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್​ ಮನವಿ ಮಾಡಿದ್ದಾರೆ.

Harsh Vardhan
Harsh Vardhan
author img

By

Published : Jan 2, 2021, 3:22 PM IST

ನವದೆಹಲಿ: ದೇಶಾದ್ಯಂತ ಇಂದಿನಿಂದ ಕೊರೊನಾ ವೈರಸ್​ ಲಸಿಕೆ ವಿತರಣೆಯ ಡ್ರೈರನ್​ ನಡೆಯುತ್ತಿದೆ. ಇದೇ ವಿಷಯವಾಗಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ ಮಾತನಾಡಿದ್ದಾರೆ.

ದೇಶಾದ್ಯಂತ ಕೊರೊನಾ ವೈರಸ್ ಲಸಿಕೆ ವಿತರಣೆ ಮಾಡಲಾಗುವುದು ಎಂದು ಸ್ಪಷ್ಟನೆ ನೀಡಿರುವ ಅವರು, ಜನರಲ್ಲಿ ಉಂಟಾಗಿರುವ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಮೊದಲ ಹಂತದಲ್ಲಿ ಮೂರು ಕೋಟಿ ಮಂದಿ ಆರೋಗ್ಯ ಕಾರ್ಯಕರ್ತರಿಗೆ ಈ ಲಸಿಕೆ ನೀಡಲಾಗುವುದು. ಇದರಲ್ಲಿ ಒಂದು ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು ಎರಡು ಕೋಟಿ ಮುಂಚೂಣಿ ಕಾರ್ಯಕರ್ತರು ಸೇರಿದ್ದಾರೆ ಎಂದರು.

  • In 1st phase of #COVID19Vaccination free #vaccine shall be provided across the nation to most prioritised beneficiaries that incl 1 crore healthcare & 2 crore frontline workers
    Details of how further 27 cr priority beneficiaries are to be vaccinated until July are being finalised pic.twitter.com/K7NrzGrgk3

    — Dr Harsh Vardhan (@drharshvardhan) January 2, 2021 " class="align-text-top noRightClick twitterSection" data=" ">

ಓದಿ: ಮೊದಲ ಹಂತದಲ್ಲಿ ಮೂರು ಕೋಟಿ ಜನರಿಗೆ ಮಾತ್ರ ಉಚಿತ ಕೋವಿಡ್​ ಲಸಿಕೆ: ಹರ್ಷವರ್ಧನ್

ದೆಹಲಿಯಲ್ಲಿರುವ ಗುರು ತೇಜ್​ ಬಹದ್ದೂರ್​ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕೋವಿಡ್ ಲಸಿಕೆ ಡ್ರೈರನ್​ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಆರೋಗ್ಯ ಸಚಿವರು, ದೆಹಲಿಯಲ್ಲಿ ಮಾತ್ರವಲ್ಲ, ಇಡೀ ದೇಶಾದ್ಯಂತ ಲಸಿಕೆ ಉಚಿತವಾಗಿ ಸಿಗಲಿದೆ ಎಂದಿದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಟ್ವಿಟರ್​ನಲ್ಲೂ ಸ್ಪಷ್ಟನೆ ನೀಡಿದ್ದಾರೆ. ದೇಶಾದ್ಯಂತ ಉಚಿತವಾಗಿ ಲಸಿಕೆ ವಿತರಣೆ ಮಾಡಲಾಗುವುದು. ಮೊದಲ ಹಂತದಲ್ಲಿ ಅತಿ ಅವಶ್ಯವಾಗಿರುವವರಿಗೆ ಮಾತ್ರ ಇದು ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.

ಜತೆಗೆ ಜುಲೈ ವೇಳೆಗೆ 27 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲಾಗುವುದು. ಈ ಬಗ್ಗೆ ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ದೇಶದ ಜನರಿಗೆ ಆರೋಗ್ಯ ಸಚಿವರು ಮನವಿ ಮಾಡಿದ್ದಾರೆ.

ಆರಂಭದಲ್ಲಿ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿ ಬಗ್ಗೆ ಖಚಿತಪಡಿಸಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ. ಈ ಹಿಂದೆ ಪೋಲಿಯೊ ಲಸಿಕೆ ಸಮಯದಲ್ಲಿ ವಿವಿಧ ರೀತಿಯ ವದಂತಿ ಹರಡಿದ್ದವು. ಆದರೆ ಜನರು ಲಸಿಕೆ ತೆಗೆದುಕೊಂಡಿದ್ದರಿಂದ ಭಾರತ ಇದೀಗ ಪೋಲಿಯೊ ಮುಕ್ತವಾಗಿದೆ ಎಂದು ಅವರು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.