ETV Bharat / bharat

ಕೇಂದ್ರದ ಕೃಷಿ ಮಸೂದೆಗೆ ವಿರೋಧ: ಸಚಿವ ಸ್ಥಾನಕ್ಕೆ ಹರ್​ಸಿಮ್ರತ್ ಕೌರ್ ಬಾದಲ್ ರಾಜೀನಾಮೆ - ಕೇಂದ್ರದ ಕೃಷಿ ಮಸೂದೆ ವಿರೋಧ

ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ, ಕೇಂದ್ರ ಸಚಿವೆ ಹರ್​ಸಿಮ್ರತ್ ಕೌರ್ ಬಾದಲ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Harsimrat Kaur resigns from Union Cabinet over farm Bills
ಹರ್ ಸಿಮ್ರತ್ ಕೌರ್ ಬಾದಲ್ ರಾಜೀನಾಮೆ
author img

By

Published : Sep 17, 2020, 9:21 PM IST

Updated : Sep 17, 2020, 10:36 PM IST

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಮಸೂದೆಗಳನ್ನು ವಿರೋಧಿಸಿ, ಕೇಂದ್ರ ಆಹಾರ ಸಂಸ್ಕರಣಾ ಖಾತೆ ಸಚಿವೆ ಹರ್​ಸಿಮ್ರತ್ ಕೌರ್ ಬಾದಲ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕೃಷಿ ಸಂಬಂಧಿತ ಮಸೂದೆ ಮಂಡನೆಗೆ ಶಿರೋಮಣಿ ಅಕಾಲಿದಳ ಭಾರಿ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ನರೇಂದ್ರ ಮೋದಿ ಸಚಿವ ಸಂಪುಟದಿಂದ ಪಕ್ಷದ ಏಕೈಕ ಪ್ರತಿನಿಧಿಯನ್ನು ಹಿಂದಕ್ಕೆ ಕರೆಸಿಕೊಂಡಿದೆ. ಹರ್​ಸಿಮ್ರತ್ ಅವರು ಆಡಳಿತಾರೂಢ ಮೋದಿ ಸರ್ಕಾರದಲ್ಲಿದ್ದ ಶಿರೋಮಣಿ ಅಕಾಲಿದಳದ ಏಕೈಕ ಪ್ರತಿನಿಧಿಯಾಗಿದ್ದರು.

  • I have resigned from Union Cabinet in protest against anti-farmer ordinances and legislation. Proud to stand with farmers as their daughter & sister.

    — Harsimrat Kaur Badal (@HarsimratBadal_) September 17, 2020 " class="align-text-top noRightClick twitterSection" data=" ">

ರೈತ ವಿರೋಧಿ ಮಸೂದೆ, ಕಾಯ್ದೆಗಳನ್ನು ವಿರೋಧಿಸಿ ಕೇಂದ್ರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವೆ. ರೈತರ ಪರವಾಗಿ ನಿಲ್ಲಲು ಹೆಮ್ಮೆ ಆಗುತ್ತದೆ ಎಂದು ಹರ್​ಸಿಮ್ರತ್ ಕೌರ್ ಬಾದಲ್ ಹೇಳಿಕೊಂಡಿದ್ದಾರೆ.

ಹರ್​ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ಕುರಿತು ಪ್ರತಿಕ್ರಿಯೆ ನೀಡಿದ ಪಕ್ಷದ ಮುಖ್ಯಸ್ಥ ಸುಖ್ಬಿರ್ ಸಿಂಗ್ ಬಾದಲ್, ಹೊಸ ಕೃಷಿ ಮಸೂದೆ ರೈತ ವಿರೋಧಿಯಾಗಿದೆ. ಹೊಸ ಕೃಷಿ ಮಸೂದೆಗಳನ್ನು ವಿರೋಧಿಸುವುದಾಗಿ ಹೇಳಿದ್ದಾರೆ.

ಕೃಷಿ ಕ್ಷೇತ್ರದ ಸುಧಾರಣೆಗಾಗಿ ಕೇಂದ್ರ ಸರ್ಕಾರ ಅಗತ್ಯ ಸರಕುಗಳ ಕಾಯ್ದೆ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ಪಡೆಯುವುದರಲ್ಲಿ ಯಶಸ್ವಿಯಾಗಿತ್ತು. ಇದಕ್ಕೆ ಬಿಜೆಪಿ ಮಿತ್ರಪಕ್ಷ ಶಿರೋಮಣಿ ಅಕಾಲಿ ದಳವೂ ಸೇರಿದಂತೆ ಪ್ರತಿಪಕ್ಷಗಳು ಭಾರಿ ವಿರೋಧಿಸಿದ್ದವು.

Last Updated : Sep 17, 2020, 10:36 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.