ಚಂಡೀಗಢ: ಹರಿಯಾಣದ ಸೋನೆಪತ್ ಮತ್ತು ಪಾಣಿಪತ್ ಜಿಲ್ಲೆಗಳಲ್ಲಿ ವಿಷಪೂರಿತ ಮದ್ಯ ಸೇವನೆಯಿಂದ ಸುಮಾರು 40 ಜನರು ಸಾವನ್ನಪ್ಪಿರುವ ಬಗ್ಗೆ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ
ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೀಡಲಾಗುವುದು. ಈಗಾಗಲೇ ಘಟನೆ ಸಂಬಂಧ ಪೊಲೀಸರು ಹಲವರನ್ನು ಬಂಧಿಸಿದ್ದಾರೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಖಟ್ಟರ್ ಹೇಳಿದ್ದಾರೆ.
ಅಕ್ರಮ ಮದ್ಯ ಮಾರಾಟದಲ್ಲಿ ಭಾಗಿಯಾಗಿರುವ ಅಧಿಕಾರಿಗಳು, ನೌಕರರು, ಗುತ್ತಿಗೆದಾರರು ಅಥವಾ ಮದ್ಯ ಮಾಫಿಯಾ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.