ನವದೆಹಲಿ: ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಬರುವ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಆಡಳಿತ ಪಕ್ಷ ಬಿಜೆಪಿ ಹಾಗೂ ಕಾಂಗ್ರೆಸ್ ಗದ್ದುಗೆಗಾಗಿ ಗುದ್ದಾಟ ನಡೆಸುತ್ತಿವೆ. ಈ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ಪಕ್ಷಕ್ಕೆ ಅತಿದೊಡ್ಡ ಗುದ್ದು ಬಿದ್ದಿದೆ.
ಹರಿಯಾಣ ಪ್ರದೇಶ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಅಶೋಕ್ ತನ್ವರ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ತಿಂಗಳು ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕೇಂದ್ರ ಸಚಿವೆ ಹಾಗೂ ದಲಿತ ನಾಯಕಿ ಕುಮಾರಿ ಸೆಲ್ಜಾ ಅವರನ್ನು ನೇಮಕ ಮಾಡಿ ಪಕ್ಷ ಆದೇಶ ಹೊರಡಿಸಿತ್ತು. ಇದಾದ ಬಳಿಕ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿತ್ತು. ಇದೀಗ ಅದು ಸ್ಫೋಟಗೊಂಡಿದ್ದು,ಅಶೋಕ್ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು,ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದಾರೆ.
-
After long deliberations with party workers and for reasons well known to all Congressman and public, I hereby resign from the primary membership of the @INCIndia pic.twitter.com/qG9dYcV6u2
— Ashok Tanwar (@AshokTanwar_INC) October 5, 2019 " class="align-text-top noRightClick twitterSection" data="
">After long deliberations with party workers and for reasons well known to all Congressman and public, I hereby resign from the primary membership of the @INCIndia pic.twitter.com/qG9dYcV6u2
— Ashok Tanwar (@AshokTanwar_INC) October 5, 2019After long deliberations with party workers and for reasons well known to all Congressman and public, I hereby resign from the primary membership of the @INCIndia pic.twitter.com/qG9dYcV6u2
— Ashok Tanwar (@AshokTanwar_INC) October 5, 2019
ಈಗಾಗಲೇ ಹರಿಯಾಣ ಚುನಾವಣೆಗಾಗಿ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಶಾಸಕಾಂಗ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷ ಎಂದು ಪಕ್ಷ ಘೋಷಿಸಿದೆ. ಹೀಗಾಗಿ ಪಕ್ಷದಲ್ಲಿ ಆಂತರಿಕ ಬೇಗುದಿ ಉಂಟಾಗಿತ್ತು. 2014ರಲ್ಲಿ ಹರಿಯಾಣ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಇವರನ್ನು ಚುನಾವಣೆಗಾಗಿ ತಾರಾ ಪ್ರಚಾರಕ ಎಂದು ನಿನ್ನೆ ಪಕ್ಷ ಘೋಷಣೆ ಮಾಡಿದೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಹರಿಯಾಣ ಮುಖ್ಯಮಂತ್ರಿ ಮನೋಹರ್ಲಾಲ್ ಖಟ್ಟರ್, ಅಶೋಕ್ ತನ್ವರ್ ಬಿಜೆಪಿ ಸೇರಿಕೊಳ್ಳುವುದಿಲ್ಲ ಎಂದಿದ್ದಾರೆ.