ನವದೆಹಲಿ: ಉಗುಳುವುದರ ಮೂಲಕ ಕೊರೊನಾ ವೈರಸ್ ಹರಡುವುದನ್ನು ತಡೆಯಲು ಹರಿಯಾಣ ಸರ್ಕಾರ ಜೂನ್ 30ರವರೆಗೆ ರಾಜ್ಯದಲ್ಲಿ ಚೂಯಿಂಗ್ ಗಮ್ ಮಾರಾಟವನ್ನು ನಿಷೇಧಿಸಿದೆ. ಇದರೊಂದಿಗೆ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಅಧಿಕಾರಿಗಳಿಗೆ ಸೂಚಿಸಿದೆ.
ಚೂಯಿಂಗ್ ಗಮ್ ಅಥವಾ ಬಬಲ್ ಗಮ್ಅನ್ನು ಇನ್ನೊಬ್ಬ ವ್ಯಕ್ತಿಯ ಕಡೆಗೆ ಉಗುಳುವ ಮೂಲಕ ಕೊರೊನಾ ವೈರಸ್ ಹರಡುವ ಸಾಧ್ಯತೆಯಿದೆ ಎಂದು ರಾಜ್ಯ ಸರ್ಕಾರದ ಆಹಾರ ಮತ್ತು ಔಷಧ ಆಡಳಿತ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.
ವೈರಸ್ನಿಂದಾಗಿ ಈಗಾಗಲೇ ಹರಿಯಾಣದಲ್ಲಿ ಸುಮಾರು 13,000 ಜನರು ಸರ್ಕಾರದ ಕಣ್ಗಾವಲಿನಲ್ಲಿದ್ದಾರೆ. ಇದರೊಂದಿಗೆ ವೈರಸ್ ಹರಡುವುದನ್ನು ಮತ್ತಷ್ಟು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಘೋಷಿಸಲಾಗಿದ್ದ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧವನ್ನು ಒಂದು ವರ್ಷ ಪರಿಣಾಮಕಾರಿಯಾಗಿ ಜಾರಿಗೆ ತರಲು ಇಲಾಖೆ ರಾಜ್ಯದಾದ್ಯಂತ ಅಧಿಕಾರಿಗಳಿಗೆ ಸೂಚಿಸಿದೆ.