ETV Bharat / bharat

ಹಥ್ರಾಸ್​ ಪ್ರಕರಣ: ನಿಯಮ ಉಲ್ಲಂಘನೆ ಆರೋಪದಲ್ಲಿ ಭೀಮ್​ ಆರ್ಮಿ ಮುಖ್ಯಸ್ಥನ ವಿರುದ್ಧ ಎಫ್​ಐಆರ್​​ - Uttarpradesh Hathras Case

ಹಥ್ರಾಸ್ ಸಂತ್ರಸ್ತೆಯ ಕುಟುಂಬಕ್ಕೆ ಸಾಂತ್ವನ ಹೇಳಲು ಪೊಲೀಸರ ವಿರೋಧದ ನಡುವೆಯೂ ಭೇಟಿ ನೀಡಿದ್ದ ಭೀಮ್​ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಸೇರಿದಂತೆ ಸುಮಾರು 400 ಮಂದಿ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಭೀಮ್​ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್
ಭೀಮ್​ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್
author img

By

Published : Oct 5, 2020, 12:39 PM IST

ಹಥ್ರಾಸ್ (ಉತ್ತರಪ್ರದೇಶ): ಹಥ್ರಾಸ್ ಸಂತ್ರಸ್ತೆಯ ಕುಟುಂಬಕ್ಕೆ ಸಾಂತ್ವನ ಹೇಳಲು ಭೇಟಿ ನೀಡಿದ್ದ ಸಂದರ್ಭದಲ್ಲಿ ಭೀಮ್​ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಸೇರಿದಂತೆ ಸುಮಾರು 400 ಮಂದಿ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಐಪಿಸಿ ಸೆಕ್ಷನ್ 144 ಮತ್ತು ಸೆಕ್ಷನ್ 188 ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಭಾನುವಾರ ಹಥ್ರಾಸ್​ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ್ದ ಆಜಾದ್​ ಮಾಧ್ಯಮದೊಂದಿಗೆ ಮಾತನಾಡಿದ್ದು, "ಸಂತ್ರಸ್ತೆಯ ಕುಟುಂಬಕ್ಕೆ ಅಸುರಕ್ಷಿತ ಭಾವನೆ ಇರುವ ಹಿನ್ನೆಲೆಯಲ್ಲಿ ಅವರಿಗೆ Y+ ಭದ್ರತೆ ನೀಡಬೇಕು. ಸಿಬಿಐ ವಿಚಾರಣೆಯು ಹೆಚ್ಚು ಸಮಯ ತೆಗೆದುಕೊಳ್ಳುವುದರಿಂದ ಪ್ರಕ್ರಿಯೆಯನ್ನು ವಿಳಂಬಗೊಳಿಸುತ್ತದೆ. ಹೀಗಾಗಿ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ಹಥ್ರಾಸ್​​ ಘಟನೆ ಕುರಿತು ವಿಚಾರಣೆ ನಡೆಸಬೇಕು" ಎಂದು ಆಗ್ರಹಿಸಿದರು.

"ಸಂತ್ರಸ್ತೆಯ ಕುಟುಂಬಕ್ಕೆ ರಾಜ್ಯದ ಅಧಿಕಾರಿಗಳು ಸಮರ್ಪಕ ಭದ್ರತೆ ಒದಗಿಸದಿದ್ದರೆ ಅವರನ್ನು ಹಳ್ಳಿಯಿಂದ ಹೊರಗೆ ಕರೆದುಕೊಂಡು ಹೋಗಿ ನನ್ನ ಸ್ವಂತ ಮನೆಯಲ್ಲಿ ಆಶ್ರಯ ನೀಡುತ್ತೇನೆ. ಇದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ" ಎಂದು ಅವರು ಹೇಳಿದರು.

ನಿನ್ನೆ ಹಥ್ರಾಸ್​ಗೆ ತೆರಳದಂತೆ ಪೊಲೀಸರು ಚಂದ್ರಶೇಖರ್ ಅವರನ್ನು ತಡೆದಿದ್ದರು. ಆದಾಗ್ಯೂ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.