ETV Bharat / bharat

ಹಥ್ರಾಸ್​ ಕೇಸ್​ ತನಿಖೆ ಮೇಲುಸ್ತುವಾರಿ ಅಲಹಾಬಾದ್​ ಹೈಕೋರ್ಟ್​ ಹೆಗಲಿಗೆ: ಸುಪ್ರೀಂ ಮಹತ್ವದ ಆದೇಶ - ಅಲಹಾಬಾದ್​ ಹೈಕೋರ್ಟ್ ಮೇಲುಸ್ತುವಾರಿಯಲ್ಲಿ ಹಥ್ರಾಸ್​ ಕೇಸ್

ಹಥ್ರಾಸ್ ಅತ್ಯಾಚಾರ ಪ್ರಕರಣದ ಸಿಬಿಐ ತನಿಖೆ ಅಲಹಾಬಾದ್​ ಹೈಕೋರ್ಟ್ ಮೇಲುಸ್ತುವಾರಿಯಲ್ಲಿ ನಡೆಯಲಿದೆ. ಸಿಬಿಐ ತನಿಖೆ ಪೂರ್ಣಗೊಂಡ ನಂತರವೇ ವಿಚಾರಣೆಯನ್ನು ಉತ್ತರ ಪ್ರದೇಶದಿಂದ ಬೇರೆಡೆಗೆ ವರ್ಗಾವಣೆ ಮಾಡುವ ಕುರಿತಾದ ಮನವಿಯನ್ನ ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.

Hathras probe
ಹಥ್ರಾಸ್​ ಕೇಸ್
author img

By

Published : Oct 27, 2020, 3:46 PM IST

ನವದೆಹಲಿ: ಉತ್ತರ ಪ್ರದೇಶದ ಹಥ್ರಾಸ್​ನಲ್ಲಿ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಿಬಿಐ ತನಿಖೆ ಅಲಹಾಬಾದ್​ ಹೈಕೋರ್ಟ್ ಮೇಲುಸ್ತುವಾರಿಯಲ್ಲಿ ನಡೆಯಬೇಕು ಎಂದು ಸುಪ್ರೀಂಕೋರ್ಟ್​ ಆದೇಶ ನೀಡಿದೆ.

ಹಥ್ರಾಸ್​ ಪ್ರಕರಣದಲ್ಲಿ ಉತ್ತರ ಪ್ರದೇಶದಲ್ಲಿ ನ್ಯಾಯಸಮ್ಮತವಾದ ತನಿಖೆ ನಡೆಯಲು ಸಾಧ್ಯವಿಲ್ಲ, ಇದರ ವಿಚಾರಣೆಗಳನ್ನು ಅಲ್ಲಿನ ಕೋರ್ಟ್​​ ಹೊರತಾಗಿ ದೆಹಲಿ ಅಥವಾ ಬೇರೆಡೆ ನಡೆಯಬೇಕು ಎಂದು ಸಂತ್ರಸ್ತೆ ಪರ ವಕೀಲರ ಮೂಲಕ ಸುಪ್ರೀಂಕೋರ್ಟ್​ಗೆ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇಂದು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎಸ್‌ ಎ ಬೊಬ್ಡೆ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠವು ಈ ಅರ್ಜಿಗಳ ವಿಚಾರಣೆ ನಡೆಸಿದೆ.

ಪ್ರಕರಣದ ಸಿಬಿಐ ತನಿಖೆಯ ವಿಚಾರಣೆಗಳನ್ನು ಅಲಹಾಬಾದ್​ ಹೈಕೋರ್ಟ್ ನೋಡಿಕೊಳ್ಳಲಿದೆ. ಸಿಬಿಐ ತನಿಖೆ ಪೂರ್ಣಗೊಂಡ ನಂತರವೇ ವಿಚಾರಣೆಯನ್ನು ಉತ್ತರ ಪ್ರದೇಶದಿಂದ ಬೇರೆಡೆಗೆ ವರ್ಗಾವಣೆ ಮಾಡುವ ಮನವಿಯನ್ನು ಪರಿಗಣಿಸುವುದಾಗಿ ನ್ಯಾಯಪೀಠ ತಿಳಿಸಿದೆ.

ಸೆಪ್ಟೆಂಬರ್​ 14ರಂದು ಉತ್ತರ ಪ್ರದೇಶದ ಹಥ್ರಾಸ್‌ನಲ್ಲಿ 19 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕಾಮುಕರು, ಆಕೆ ಮೇಲೆ ಬರ್ಬರವಾಗಿ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆ ದೆಹಲಿಯ ಸಫ್ತರ್​ಜಂಗ್​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಮೃತದೇಹವನ್ನು ಸಂತ್ರಸ್ತೆಯ ಕುಟುಂಬಕ್ಕೆ ಹಸ್ತಾಂತರಿಸದೇ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಸದ್ಯ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.