ETV Bharat / bharat

ಬೀದಿಬದಿ ವ್ಯಾಪಾರಿಗಳಿಗೆ ಬಿಗ್​ ರಿಲೀಫ್​: ವ್ಯಾಪಾರಕ್ಕೆ ಅವಕಾಶ - ದೆಹಲಿ ಕೊರೊನಾ

ಬೆಳಗ್ಗೆ 10 ಗಂಟೆಯಿಂದ ರಾತ್ರಿ 8ರವರೆಗೆ ರಸ್ತೆಬದಿ ಮಾರಾಟಗಾರರು ಮತ್ತು ಸಣ್ಣ ವ್ಯಾಪಾರಸ್ಥರು ವ್ಯವಹಾರಗಳನ್ನು ನಡೆಸಬಹುದು ಎಂದು ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.

ದೆಹಲಿ ಸರ್ಕಾರ ಆದೇಶ
ದೆಹಲಿ ಸರ್ಕಾರ ಆದೇಶ
author img

By

Published : Jul 28, 2020, 7:24 AM IST

ನವದೆಹಲಿ: ಅಗತ್ಯವಾದ ಮುನ್ನೆಚ್ಚರಿಕೆ ಮತ್ತು ವ್ಯಕ್ತಿಗತ ಅಂತರ ಕಾಪಾಡಿಕೊಂಡು ರಸ್ತೆಬದಿ ಮಾರಾಟಗಾರರು ಮತ್ತು ವ್ಯಾಪಾರಿಗಳಿಗೆ ತಮ್ಮ ವ್ಯವಹಾರವನ್ನು ಪುನರಾರಂಭಿಸಲು ದೆಹಲಿ ಸರ್ಕಾರ ಹಸಿರು ನಿಶಾನೆ ತೋರಿಸಿದೆ.

ಕೊರೊನಾ ವೈರಸ್​ ಪ್ರಚೋದಿತ ಲಾಕ್‌ಡೌನ್, ಹೆಚ್ಚಾಗಿ ಸಣ್ಣ ವ್ಯಾಪಾರಿಗಳ ಮೇಲೆ ಭಾರಿ ಪರಿಣಾಮ ಬೀರಿತ್ತು. ಮುಖ್ಯವಾಗಿ ಬೀದಿಬದಿ ವ್ಯಾಪಾರಿಗಳು ಹೆಚ್ಚು ಭಾದಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 10ಗಂಟೆಯಿಂದ ರಾತ್ರಿ 8ರವರೆಗೆ ರಸ್ತೆಬದಿ ಮಾರಾಟಗಾರರು ಮತ್ತು ಸಣ್ಣ ವ್ಯಾಪಾರಸ್ಥರು ವ್ಯವಹಾರಗಳನ್ನು ನಡೆಸಬಹುದು ಎಂದು ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.

ಆದರೆ, ದೆಹಲಿ ಸರ್ಕಾರ ವಾರದ ಮಾರುಕಟ್ಟೆಗಳನ್ನು ತೆರೆಯಲು ಅನುಮತಿ ನೀಡಿಲ್ಲ. ಏಕೆಂದರೆ ಈ ಮಾರುಕಟ್ಟೆಗಳು ಸಾಮಾನ್ಯವಾಗಿ ಹೆಚ್ಚಿನ ಜನಜಂಗುಳಿಗೆ ಕಾರಣವಾಗುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.