ನಿಜಾಮಾಬಾದ್: ಕಾರ್ಯ ನಿರ್ವಹಿಸುತ್ತಿದ್ದ ಮುಖ್ಯ ಪೇದೆಯೊಬ್ಬರು ಎಸ್ಐ ರಿವಾಲ್ವರ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ಇಂದಲ್ವಾಯ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಮುಖ್ಯ ಪೇದೆ ಪ್ರಕಾಶ್ ರೆಡ್ಡಿ ಎಂದಿನಂತೆ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಆದ್ರೆ ಏನಾಯ್ತೋ ಏನೋ ತಿಳಿದಿಲ್ಲ. ಎಸ್ಐ ಅವರ ರಿವಾಲ್ವರ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ಪ್ರಕಾಶ್ ರೆಡ್ಡಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಪ್ರಕಾಶ್ ರೆಡ್ಡಿಗೆ ಮಗ, ಮಗಳು ಇದ್ದಾರೆ. ಸುದ್ದಿ ತಿಳಿದ ಹಿರಿಯ ಅಧಿಕಾರಿಗಳು ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆತ್ಮಹತ್ಯೆ ಬಗ್ಗೆ ನಿಖರ ಕಾರಣ ತಿಳಿದು ಬರಬೇಕಾಗಿದ್ದು, ಈ ಘಟನೆ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.