ETV Bharat / bharat

ನಿಜಾಮುದ್ದೀನ್ ಕಾರ್ಯಕ್ರಮದಲ್ಲಿ ರಾಜ್ಯದ 45 ಮಂದಿ ಭಾಗಿ: ಶಿರಾದಲ್ಲಿ ಮೃತಪಟ್ಟ ವ್ಯಕ್ತಿ ಇವರಲ್ಲೊಬ್ಬ! - coronA

ದೆಹಲಿಯ ನಿಜಾಮುದ್ದೀನ್​ ಪ್ರದೇಶದ ಮಸೀದಿಯಲ್ಲಿ ಕರ್ನಾಟಕದವರೂ ಭಾಗಿಯಾಗಿದ್ದು ಅವರ ಮೇಲೆ ನಿಗಾ ಇಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್​ ಮಾಡಿದ್ದಾರೆ. ಜೊತೆಗೆ ಕೆಲ ದಿನಗಳ ಹಿಂದೆ ತುಮಕೂರಿನಲ್ಲಿ ಸೋಂಕಿನಿಂದ ಮೃತಪಟ್ಟಿದ್ದ ವ್ಯಕ್ತಿ ಕೂಡಾ ಇಲ್ಲಿ ಭಾಗಿಯಾಗಿದ್ದರು ಎಂದು ಸಚಿವರು ತಿಳಿಸಿದ್ದಾರೆ.

health minister sriramulu tweet
ಶ್ರೀರಾಮುಲು ಟ್ವೀಟ್​
author img

By

Published : Mar 31, 2020, 1:30 PM IST

ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಪ್ರದೇಶದ ಜಮಾತ್ ಮಸೀದಿಯಲ್ಲಿ ಮಾರ್ಚ್ 10ರಂದು ಧಾರ್ಮಿಕ ಕಾರ್ಯಕ್ರಮ ನಡೆದಿದ್ದು, ಅದರಲ್ಲಿ ಕರ್ನಾಟಕದಿಂದ ಸುಮಾರು 45 ಮಂದಿ ಭಾಗವಹಿಸಿರೋದು ಗೊತ್ತಾಗಿದೆ. ಶಿರಾದಲ್ಲಿ ಮೃತಪಟ್ಟ ವ್ಯಕ್ತಿಯು ಇವರಲ್ಲೊಬ್ಬರಾಗಿದ್ದರು ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

  • ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಮಾರ್ಚ್ 10 ರಂದು ಧಾರ್ಮಿಕ ಕಾರ್ಯಕ್ರಮ ನಡೆದಿದ್ದು, ಅದರಲ್ಲಿ ಕರ್ನಾಟಕದಿಂದ ಸುಮಾರು 45 ಮಂದಿ ಭಾಗವಹಿಸಿದ್ದರು ಎಂಬ ಮಾಹಿತಿಯಿದೆ. ಶಿರಾದಲ್ಲಿ ಮೃತಪಟ್ಟ ವ್ಯಕ್ತಿಯು ಇವರಲ್ಲೊಬ್ಬರಾಗಿದ್ದರು. #IndiaFightsCornona #COVID19

    — B Sriramulu (@sriramulubjp) March 31, 2020 " class="align-text-top noRightClick twitterSection" data=" ">

ಹೀಗಾಗಿ ಪ್ರಾರ್ಥನೆಯಲ್ಲಿ ಭಾಗವಹಿಸಿದವರಿಗೆಲ್ಲಾ ಸೋಂಕು ಹರಡಿರುವ ಸಾಧ್ಯತೆಗಳನ್ನು ತಳ್ಳಿಹಾಕಲಾಗುವುದಿಲ್ಲ. ಹಾಗಾಗಿ ಇವರನ್ನು ಪತ್ತೆ ಮಾಡಿ, ಕ್ವಾರಂಟೈನ್​​ ಮಾಡುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದೆ. ಇವರಲ್ಲಿ ಈಗಾಗಲೇ 13 ವ್ಯಕ್ತಿಗಳ ಮೇಲೆ ನಿಗಾವಹಿಸಲಾಗಿದೆ ಎಂದು ಮತ್ತೊಂದು ಟ್ವೀಟ್​ನಲ್ಲಿ ಸ್ಪಷ್ಟಪಡಿಸಿದ್ದಾರೆ.

  • ಹೀಗಾಗಿ, ಪ್ರಾರ್ಥನೆಯಲ್ಲಿ ಭಾಗವಹಿಸಿದವರಿಗೆಲ್ಲಾ ಸೋಂಕು ಹರಡಿರುವ ಸಾಧ್ಯತೆಗಳನ್ನು ತಳ್ಳಿಹಾಕಲಾಗುವುದಿಲ್ಲ. ಹಾಗಾಗಿ ಇವರನ್ನು ಪತ್ತೆ ಮಾಡಿ, Quarantine ಮಾಡುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದೆ.
    ಇವರಲ್ಲಿ ಈಗಾಗಲೇ 13 ವ್ಯಕ್ತಿಗಳನ್ನು ಪತ್ತೆಹಚ್ಚಿ ಪ್ರತ್ಯೇಕಿಸಲ್ಪಟ್ಟ ಕೇಂದ್ರದಲ್ಲಿ ನಿಗಾವಹಿಸಲಾಗಿದೆ. #IndiaFightsCornona

ಇನ್ನೊಂದು ಟ್ವೀಟ್​ನಲ್ಲಿ ಆಸ್ಟ್ರೇಲಿಯಾ, ಸಿಂಗಪೂರ್, ದುಬೈ, ಸೌದಿ ಅರೇಬಿಯಾ, ಇಂಡೋನೇಷಿಯಾ ಸೇರಿದಂತೆ ಹಲವು ದೇಶಗಳಿಂದ ಪ್ರವಾಸಿಗರು ಆಗಮಿಸಿದ್ದರು ಎಂಬ ಮಾಹಿತಿ ದೊರೆತಿದೆ. ಉಳಿದ ವ್ಯಕ್ತಿಗಳನ್ನು ಆದಷ್ಟು ಬೇಗ ಗುರುತಿಸಿ ಎಲ್ಲರನ್ನೂ ಕ್ವಾರಂಟೈನ್​ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.