ETV Bharat / bharat

ಗಾಂಧಿ ಹಂತಕ ಗೋಡ್ಸೆ ವಿರುದ್ಧದ ಕಮಲ್ ಹಾಸನ್ ವಿವಾದಿತ ಹೇಳಿಕೆ : ಇಂದು ಮಧ್ಯಾಹ್ನ 2ಗಂಟೆಗೆ ವಿಚಾರಣೆ - undefined

ಚುನಾವಣಾ ಪ್ರಚಾರದ ವೇಳೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದರ ಸಂಬಂಧ ಇಂದು ದೆಹಲಿಯ ಪಟಿಯಾಲ ಹೌಸ್​ ಕೋರ್ಟಿನಲ್ಲಿ ವಿಚಾರಣೆ ನಡೆಯಲಿದೆ.

ಕಮಲ್ ಹಾಸನ್
author img

By

Published : May 15, 2019, 12:09 PM IST

Updated : May 15, 2019, 12:15 PM IST

ಮಹಾತ್ಮ ಗಾಂಧೀಜಿ ಹಂತಕ ನಾಥೂರಾಮ್ ಗೋಡ್ಸೆ ಕುರಿತಾಗಿ ವಿವಾದಿತ ಹೇಳಿಕೆ ನೀಡಿದ್ದ ಬಹುಭಾಷಾ ನಟ ಕಮಲ್ ಹಾಸನ್​ ವಿರುದ್ಧ ದೆಹಲಿಯ ಪಟಿಯಾಲ ಹೌಸ್​ ಕೋರ್ಟ್‌ನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಕ್ರಿಮಿನಲ್​ ಮೊಕದ್ದಮೆ ದಾಖಲಾಗಿತ್ತು. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2 ಗಂಟೆಗೆ ವಿಚಾರಣೆ ನಡೆಯಲಿದೆ.

'ಮಕ್ಕಳ್ ನೀದಿ ಮಯ್ಯಮ್' ಪಕ್ಷದ ಸ್ಥಾಪಕ ಕಮಲ್ ಹಾಸನ್​ ಕಳೆದ ಭಾನುವಾರ ಚುನಾವಣಾ​ ಪ್ರಚಾರದ ವೇಳೆ 'ಸ್ವತಂತ್ರ ಭಾರತದ ಮೊದಲ ಉಗ್ರ ಗೋಡ್ಸೆ' ಎಂದು ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಹಿಂದೂ ಧರ್ಮದ ವ್ಯಕ್ತಿಯನ್ನು ಭಯೋತ್ಪಾದನೆಯೊಂದಿಗೆ ತಳುಕು ಹಾಕಿದ್ದರಿಂದ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಅವರ ವಿರುದ್ಧ ಮೊಕದ್ದಮೆ ಹೂಡಲಾಗಿತ್ತು. ಈ ಹೇಳಿಕೆ ಅನೇಕರ ಆಕ್ರೋಶಕ್ಕೆ ಕೂಡಾ ಕಾರಣವಾಗಿತ್ತು.

ಕಮಲ್ ಹೇಳಿಕೆ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು. ಖ್ಯಾತ ನಟರಾದ ನೀವು ಜನರಿಗೆ ಸ್ಫೂರ್ತಿಯಾಗಬೇಕೇ ಹೊರತು ದೇಶ ಒಡೆಯುವ ಕೆಲಸ ಮಾಡಬೇಡಿ ಎಂದು ಬಾಲಿವುಡ್ ನಟ ವಿವೇಕ್ ಒಬೆರಾಯ್ ಸೇರಿ ಸಾಕಷ್ಟು ಮಂದಿ ಕಮಲ್​​​ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು.

Intro:Body:

kamal

Conclusion:
Last Updated : May 15, 2019, 12:15 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.