ಕುಪ್ವಾರಾ: ತಂಗ್ದಾರ್ ಸೆಕ್ಟರ್ ಕುಪ್ವಾರಾ ಜಿಲ್ಲೆಯಲ್ಲಿ ಭಾರಿ ಗುಂಡಿನ ದಾಳಿ ಆರಂಭವಾಗಿದೆ.
ಕುಪ್ವಾರ ಜಿಲ್ಲೆಯ ತಂಗ್ದಾರ್ ವಲಯದಲ್ಲಿ ಸಿಎಫ್ವಿ ತಂಗ್ದಾರ್ ವಲಯದ ದಿಲ್ದಾರ್ ಪ್ರದೇಶದಲ್ಲಿ ಭಾರಿ ಗುಂಡಿನ ದಾಳಿ ನಡೆಯುತ್ತಿದೆ. ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ಮಾಡಿದ್ದು, ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ.
ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿರೇಖೆಯಲ್ಲಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಲೇ ಇರುತ್ತದೆ. ಇದಕ್ಕೆ ಭಾರತೀಯ ಸೇನೆ ಸಹ ತಕ್ಕ ಪ್ರತ್ಯುತ್ತರ ನೀಡುತ್ತದೆ. 300ಕ್ಕಿಂತ ಹೆಚ್ಚಿನ ಉಗ್ರರು ಭಾರತದ ಗಡಿಯೊಳಗೆ ನುಗ್ಗಲು ಸಂಚು ರೂಪಿಸಿದ್ದಾರೆ ಎಂಬ ವಿಚಾರ ಸೇನೆಗೆ ತಿಳಿದಿದೆ. ಈ ಹಿನ್ನೆಲೆಯಲ್ಲಿ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಸೇನಾ ಮೂಲಗಳು ಇತ್ತೀಚೆಗಷ್ಟೇ ತಿಳಿಸಿದ್ದವು.