ನವದೆಹಲಿ: ರಾಜಧಾನಿ ದೆಹಲಿಯಲ್ಲಿ ನಿನ್ನೆ ಸಂಜೆಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಅನೇಕ ಪ್ರದೇಶಗಳು ಜಲಾವೃತವಾಗಿವೆ. ದಿನವಿಡೀ ಇಂತಹದ್ದೇ ಪರಿಸ್ಥಿತಿಗಳು ಮೇಲುಗೈ ಸಾಧಿಸುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಪ್ರಾದೇಶಿಕ ಹವಾಮಾನ ಕೇಂದ್ರದಿಂದ ಪಡೆದ ಮಾಹಿತಿಯ ಪ್ರಕಾರ, ದೆಹಲಿಯ ಕನಿಷ್ಠ ತಾಪಮಾನವು ಗುರುವಾರ ಬೆಳಗ್ಗೆ 27.4 ಡಿಗ್ರಿ ಸೆಲ್ಸಿಯಸ್ ನಷ್ಟಿತ್ತು. ಸದ್ಯ ಇದು ಮತ್ತಷ್ಟು ಕುಸಿಯುತ್ತಿದೆ ಎಂದು ನಿರೀಕ್ಷಿಸಲಾಗಿದೆ.
ಇನ್ನೂ ನಿರಂತರ ಮಳೆಯಿಂದಾಗಿ ಹಲವಾರು ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಈಗಾಗಲೇ ಮಿಂಟೋ ರಸ್ತೆಯನ್ನು ದೆಹಲಿ ಪೊಲೀಸರು ಮುಚ್ಚಿದ್ದಾರೆ. ಆ ಎಲ್ಲ ಸ್ಥಳಗಳಲ್ಲಿ ಮತ್ತು ವಿಶೇಷವಾಗಿ ರಸ್ತೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲಾಗುತ್ತಿದೆ.
ಹಲವು ಪ್ರದೇಶಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಹೀಗಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.