ಮುಂಬೈ: ಮಹಾಮಾರಿ ಕೊರೊನಾ ನಡುವೆ ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ ಜೋರಾಗಿದೆ. ಪರಿಣಾಮ, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಲಕ್ಷಾಂತರ ಜನರ ಬದುಕು ದುಸ್ತರವಾಗಿದೆ.
ಮಳೆ ಅನಾಹುತದ ಪರಿಸ್ಥಿತಿ ಅವಲೋಕಿಸಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಜನರಿಗೆ ಎಲ್ಲ ರೀತಿಯ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಠಾಕ್ರೆ ಜತೆಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಮಹಾಮಳೆಯಿಂದ ತತ್ತರಿಸಿ ಹೋಗಿರುವ ಮಹಾರಾಷ್ಟ್ರದ ಪ್ರತಿಯೊಬ್ಬರಿಗೂ 10 ಸಾವಿರ ರೂ ಪರಿಹಾರ ನೀಡಬೇಕು ಎಂದು ಬಿಜೆಪಿ, ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಜತೆಗೆ ಪರಿಸ್ಥಿತಿಯನ್ನು 'ನೈಸರ್ಗಿಕ ವಿಕೋಪ' ಎಂದು ಘೋಷಣೆ ಮಾಡುವಂತೆಯೂ ಕೋರಿದೆ.