ETV Bharat / bharat

ಜಮ್ಮು- ಕಾಶ್ಮೀರದಲ್ಲಿ ಧಾರಾಕಾರ ಮಳೆ: ನಿವಾಸಿಗಳಿಗೆ ಎಚ್ಚರಿಕೆಯಿಂದಿರಲು ಸೂಚನೆ - ಹವಾಮಾನ ಇಲಾಕೆ

ಜಮ್ಮು ಮತ್ತು ಕಾಶ್ಮೀರ ಭಾಗದಲ್ಲಿ ಆಗಸ್ಟ್ 26ರ ಮಧ್ಯರಾತ್ರಿಯಿಂದ ಮಳೆಯ ಆರ್ಭಟ ಜೋರಾಗಲಿದೆ ಎಂದು ಅಲ್ಲಿನ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ವೇಳೆ ಯಾರೂ ನೀರು ಹರಿಯುವ ಜಾಗಗಳತ್ತ ತೆರಳಬಾರದು ಎಂದು ಸೂಚನೆ ನೀಡಿದೆ.

Heavy rainfall in Jammu and Kashmir region
ಜಮ್ಮು&ಕಾಶ್ಮೀರದಲ್ಲಿ ಧಾರಾಕಾರ ಮಳೆ: ನಿವಾಸಿಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ
author img

By

Published : Aug 27, 2020, 12:10 PM IST

ರಜೌರಿ (ಜಮ್ಮು ಮತ್ತು ಕಾಶ್ಮೀರ): ಜಮ್ಮು & ಕಾಶ್ಮೀರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇಲ್ಲಿನ ರಜೌರಿ ಪ್ರದೇಶದಲ್ಲಿ ಯಾರೂ ನೀರು ಹರಿಯುವ ಪ್ರದೇಶಗಳತ್ತ ತೆರಳದಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ರಜೌರಿ ಪೊಲೀಸರು, ‘ಕಳೆದ 12 ಗಂಟೆಗಳಿಂದ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಬಹುತೇಕ ಎಲ್ಲ ನೀರಿನ ಮೂಲಗಳು ತುಂಬಿ ಹರಿಯುತ್ತಿವೆ. ಈ ಕಾರಣದಿಂದಾಗಿ ಜನರು ನೀರು ಹರಿಯುವಂತಹ ಸ್ಥಳಗಳ ಬಳಿ ತೆರಳಬಾರದು, ಒಂದು ವೇಳೆ ಯಾವುದಾದರೂ ತುರ್ತು ಸಂದರ್ಭವಿದ್ದರೆ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ’ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಜಮ್ಮು&ಕಾಶ್ಮೀರದಲ್ಲಿ ಧಾರಾಕಾರ ಮಳೆ

ಇದಲ್ಲದೆ ಜಮ್ಮು ಮತ್ತು ಕಾಶ್ಮೀರದ ಹವಾಮಾನ ಇಲಾಖೆಯೂ ಎಚ್ಚರಿಕೆ ನೀಡಿದ್ದು, ಮುಂದಿನ 72 ಗಂಟೆಗಳ ಕಾಲ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದಿದೆ.

ಆಗಸ್ಟ್​ 26ರ ಮಧ್ಯರಾತ್ರಿಯಿಂದ ಮೂರು ದಿನ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದ್ದು, ಲಡಾಖ್​​ನಲ್ಲಿ ಈ ವರ್ಷದ ಮಳೆ ಕೊರತೆಯನ್ನು ನೀಗಿಸಲಿದೆ ಎನ್ನಲಾಗಿದೆ. ಇದಲ್ಲದೇ ಬಿಡುವಿಲ್ಲದೇ ಸುರಿಯುತ್ತಿರುವ ಮಳೆಯಿಂದಾಗಿ 270 ಕಿ.ಮೀಟರ್ ಉದ್ದದ ಶ್ರೀನಗರ - ಜಮ್ಮುನಿನ ಹೆದ್ದಾರಿಯಲ್ಲಿ ಟ್ರಾಫಿಕ್​ ಜಾಮ್​​ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.