ನವದೆಹಲಿ: ಒಡಿಶಾ, ಬಿಹಾರ, ರಾಜಸ್ಥಾನ ಮತ್ತು ಉತ್ತರಾಖಂಡ್ ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪಶ್ಚಿಮ ಬಂಗಾಳ ಮತ್ತು ಗುಜರಾತ್‌ನ ಗಂಗಾ ನದಿ ತೀರದ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಇದರೊಂದಿಗೆ ಹಿಮಾಚಲ ಪ್ರದೇಶ, ಉತ್ತರಾಖಂಡ್, ಉತ್ತರ ಪ್ರದೇಶ, ಪಶ್ಚಿಮ ರಾಜಸ್ಥಾನ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್, ಅಸ್ಸಾಂ, ಮೇಘಾಲಯ, ಮಧ್ಯ ಮಹಾರಾಷ್ಟ್ರ, ಕೊಂಕಣ ಪ್ರದೇಶ, ಗೋವಾ, ಆಂಧ್ರ ಪ್ರದೇಶದ ಕರಾವಳಿ ಜಿಲ್ಲೆಗಳು, ತಮಿಳುನಾಡು, ಪುದುಚೇರಿ ಮತ್ತು ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನೈಋತ್ಯ ರಾಜಸ್ಥಾನ ಮತ್ತು ನೆರೆಯ ಪ್ರದೇಶಗಳಲ್ಲೂ ಮುಂದಿನ 24 ಗಂಟೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಗಂಟೆಗೆ ಸುಮಾರು 50-60 ಕಿ.ಮೀ. ವೇಗದದಲ್ಲಿ ಬೀಸುವ ಗಾಳಿ ನೈಋತ್ಯ ಅರಬ್ಬೀ ಸಮುದ್ರಕ್ಕೆ ಅಪ್ಪಳಿಸಲಿದೆ. ಉತ್ತರ ಬಂಗಾಳ ಕೊಲ್ಲಿಯಲ್ಲೂ ಗಂಟೆಗೆ 45-55 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಗುಜರಾತ್ ಕರಾವಳಿಯುದ್ದಕ್ಕೂ ಭಾರೀ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.