ಮುಂಬೈ (ಮಹಾರಾಷ್ಟ್ರ): ಮುಂದಿನ ಎರಡು-ಮೂರು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಇಂದಿನಿಂದ ಅ. 16ರವರೆಗೆ ಮಹಾರಾಷ್ಟ್ರದ ಭಾರಿ ಮಳೆ ಆಗಲಿದೆ ಎಂದು ಐಎಂಡಿ ಮೂಲಗಳು ತಿಳಿಸಿವೆ.
ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡ ಪ್ರದೇಶಗಳಲ್ಲಿ ಬುಧವಾರ ಮಳೆಯಾಗುವ ನಿರೀಕ್ಷೆಯಿದ್ದರೆ, ಮುಂಬೈ ಮತ್ತು ಕೊಂಕಣ ಪ್ರದೇಶದಲ್ಲಿ 15 ಮತ್ತು 16 ರಂದು ಮಳೆಯಾಗಲಿದೆ.
ಕಳೆದೆರಡು ದಿನಗಳಲ್ಲಿ ಸುರಿದ ಭಾರಿ ಮಳೆಯು ಮರಾಠವಾಡ, ಉತ್ತರ ಮಹಾರಾಷ್ಟ್ರ ಮತ್ತು ವಿದರ್ಭದಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದೆ ಎಂದು ಇಲ್ಲಿನ ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.