ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಜೆಎಂಎಂ ಹಾಗೂ ಮಿತ್ರ ಪಕ್ಷಗಳು ಗೆಲುವಿನ ನಗೆ ಬೀರಿದ್ದು, ನಾಳೆ ನೂತನ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಭಾನುವಾರ ಮಧ್ಯಾಹ್ನ ಜರುಗಲಿರುವ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರಿಗೂ ಆಹ್ವಾನ ನೀಡಲಾಗಿದೆ.
ಇವರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಸೇರಿದಂತೆ ಇತರೆ ರಾಜಕೀಯ ಮುಖಂಡರಿಗೆ ಆಹ್ವಾನಿಸಲಾಗಿದೆ.