ETV Bharat / bharat

ಮಹಿಳೆ ಜೊತೆ ಪೊಲೀಸ್ ಅಧಿಕಾರಿ ಅನುಚಿತ ವರ್ತನೆ: ವಿಡಿಯೋ ವೈರಲ್ - ಮಹಿಳೆಗೆ ಥಳಿಸಿದ ಪೊಲೀಸ್ ಅಧಿಕಾರಿ

ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

cop misbehaves with woman
ಮಹಿಳೆ ಜೊತೆ ಪೊಲೀಸ್ ಅಧಿಕಾರಿ ಅನುಚಿತ ವರ್ತನೆ
author img

By

Published : Sep 30, 2020, 7:19 AM IST

ಹಮೀರ್‌ಪುರ (ಹಿಮಾಚಲ ಪ್ರದೇಶ): ಹಮೀರ್‌ಪುರದ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ವೈರಲ್​ ಆಗಿದ್ದು, ಹಿರಿಯ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.

ವಿಡಿಯೋದಲ್ಲಿ, ಕೆಲವು ಪೊಲೀಸ್ ಸಿಬ್ಬಂದಿ ಮಹಿಳೆಯೊಂದಿಗೆ ಮಾತಿನ ಚಕಮಕಿ ನಡೆಸುತ್ತಿರುವುದನ್ನು ಕಾಣಬಹುದು. ಪೊಲೀಸ್ ಅಧಿಕಾರಿಯೊಬ್ಬರು ಆಕೆಯನ್ನು ಕಾಲಿನಿಂದ ಒದೆಯುತ್ತಿರುವುದನ್ನೂ ವಿಡಿಯೋದಲ್ಲಿ ಕಾಣಬಹುದಾಗಿದೆ.

ಮಹಿಳೆ ಜೊತೆ ಪೊಲೀಸ್ ಅಧಿಕಾರಿ ಅನುಚಿತ ವರ್ತನೆ (ವೈರಲ್ ವಿಡಿಯೋ)

ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿರುವುದು ಹಮೀರ್ಪುರ್ ಪೊಲೀಸ್ ಠಾಣಾಧಿಕಾರಿ ಪ್ರತಾಪ್ ಪಟೇಲ್ ಎಂದು ಗುರುತಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ದೂರುದಾರರೊಬ್ಬರು ಈ ಘಟನೆಯ ವಿಡಿಯೋವನ್ನು ರೆಕಾರ್ಡ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋ ಸ್ಥಳೀಯ ಜನರ ಆಕ್ರೋಶಕ್ಕೆ ಕಾರಣವಾಗಿದ್ದು, ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ. ವಿಡಿಯೋದಲ್ಲಿ ಪೊಲೀಸ್ ಅಧಿಕಾರಿ ಪ್ರತಾಪ್ ಪಟೇಲ್ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಬಗ್ಗೆ ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಹಮೀರ್‌ಪುರ ಎಸ್​ಪಿ ನರೇಂದ್ರ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.