ಶ್ರೀನಗರ(ಜಮ್ಮು ಕಾಶ್ಮೀರ): ರಾಜ್ಯದ ಶೋಪಿಯಾನ್ ಜಿಲ್ಲೆ ಬಳಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಮೂವರು ಉಗ್ರರನ್ನು ಸೆದೆಬಡಿಯಲು ಭಾರತೀಯ ರಕ್ಷಣಾ ಪಡೆ ಹಾಗೂ ಜಮ್ಮ ಮತ್ತು ಕಾಶ್ಮೀರದ ಪೊಲೀಸರು ಯಶಸ್ವಿಯಾಗಿದ್ದಾರೆ.
ಶೋಪಿಯಾನ್ ಜಿಲ್ಲೆಯ ವಾಚಿ ಕಣಿವೆಯಲ್ಲಿ ಉಗ್ರರು ಅಡಗಿರುವ ಮಾಹಿತಿಯನ್ನರಿತ ಪೊಲೀಸರು, ಉಗ್ರರ ಸೆರೆಗೆ ಹೊಂಚು ಹಾಕಿದ್ದ ವೇಳೆ ಪೊಲೀಸ್ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ, ಮೂವರು ಉಗ್ರರನ್ನು ಎನ್ಕೌಂಟರ್ ಮೂಲಕ ಪೊಲೀಸರು ಹತ್ಯೆ ಮಾಡಿದ್ದಾರೆ.
ಈ ಮೂವರು ಮಾತ್ರವಲ್ಲದೇ ಕಾಶ್ಮೀರ ಕಣಿವೆಯಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಶಂಕೆ ಹಿನ್ನೆಲೆ, ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.