ETV Bharat / bharat

ಗೃಹ ಸಚಿವ ಅಮಿತ್​ ಶಾ ಮತ್ತೆ ಆಸ್ಪತ್ರೆಗೆ ದಾಖಲು - Home Minister Amit Shah

ಕೇಂದ್ರ ಗೃಹ ಸಚಿವ ಅಮಿತ್​ ಶಾ ತೀವ್ರ ಉಸಿರಾಟದ ತೊಂದರೆಯಿಂದ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗೃಹ ಸಚಿವ ಅಮಿತ್​ ಶಾ
ಗೃಹ ಸಚಿವ ಅಮಿತ್​ ಶಾ
author img

By

Published : Sep 13, 2020, 7:06 AM IST

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ತೀವ್ರ ಉಸಿರಾಟದ ತೊಂದರೆಯಿಂದ ಮತ್ತೆ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಗಸ್ಟ್ 2ರಂದು ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸಚಿವರಿಗೆ 14ರಂದು ನೆಗೆಟಿವ್​ ವರದಿ ಬಂದಿತ್ತು. ಆ ಬಳಿಕ ಕೊರೊನಾ ಬಳಿಕದ ಚಿಕಿತ್ಸೆ ಪಡೆದು ಆ.31ರಂದು ಡಿಸ್ಚಾರ್ಜ್​ ಆಗಿದ್ದರು. ಆದರೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಮತ್ತೆ ಆಸ್ಪತ್ರೆ ಸೇರಿದ್ದಾರೆ.

ವೈದ್ಯಕೀಯ ಮೂಲಗಳ ಪ್ರಕಾರ, 'ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ತಿಳಿದುಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.