ಪಂಚಮಹಲ್ (ಗುಜರಾತ್): ಜಿಲ್ಲೆಯ ಜಂಬುಘೋಡಾ ತಾಲೂಕಿನ ಕಾಂಜಿ ಪಾನಿ ಗ್ರಾಮದಲ್ಲಿ ಮನೆ ಕುಸಿದು ಬಿದ್ದಿರುವ ಕಾರಣ ಮೂವರು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮನೆ ಕುಸಿದುಬಿದ್ದಿದೆ.
ಮನೆಯ ಅವಶೇಷಗಳಡಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.